ನವದೆಹಲಿ: ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸ್ಪೋರ್ಟ್ & ಸೇಲ್ಸ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ 5008 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅರ್ಜಿ ಸಲ್ಲಿಕೆಯ ಗಡುವು ನಾಳೆ ಕೊನೆಗೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಎಸ್ಬಿಐ ವೆಬ್ಸೈಟ್ sbi.co.in ಮತ್ತು ibpsonline.ibps.in ಪೋರ್ಟಲ್’ಗಳ ಮೂಲಕ ಅರ್ಜಿ ಸಲ್ಲಿಸಬಹುದು. 

ಈ ಅಧಿಸೂಚನೆಯ ಮೂಲಕ, ಪದವಿ ವಿದ್ಯಾರ್ಹತೆಯೊಂದಿಗೆ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ಸ್’ನ 5008 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 243, ಇತರ ಹಿಂದುಳಿದ ವರ್ಗಗಳಿಗೆ 1165, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 490, ಪರಿಶಿಷ್ಟ ಜಾತಿಗೆ 743 ಮತ್ತು ಪರಿಶಿಷ್ಟ ಪಂಗಡಕ್ಕೆ 467 ಹುದ್ದೆಗಳಿವೆ. ಸಾಮಾನ್ಯ / ಒಬಿಸಿ / ಇಡಬ್ಲ್ಯುಸಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750 ರೂಪಾಯಿ ನಿಗದಿಪಡಿಸಲಾಗಿದೆ. ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇದು ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳನ್ನ ಒಳಗೊಂಡಿದೆ. ಸ್ಥಳೀಯ ಭಾಷಾ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

>> ಮೊದಲು ಅಧಿಕೃತ ವೆಬ್ಸೈಟ್ sbi.co.in ಗೆ ಹೋಗಿ.

>> ವೆಬ್ಸೈಟ್‍ನ ಮುಖಪುಟದಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಲಿಂಕ್ ಕ್ಲಿಕ್ ಮಾಡಿ. ನಂತರ ಲಾಗಿನ್ ಕೇಳಲಾಗುತ್ತೆ, ತಕ್ಷಣವೇ ಲಾಗ್ ಇನ್ ಮಾಡಿ.

>> ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಶುಲ್ಕವನ್ನು ಪಾವತಿಸಿ.

>> ಅರ್ಜಿ ಶುಲ್ಕವನ್ನು ಪಾವತಿಸಿದ ನಂತರ ಅರ್ಜಿಯನ್ನು ಪೂರ್ಣಗೊಳಿಸಿ.

>> ನಂತರ ಮುಂಭಾಗದ ಪ್ರಿಂಟ್‍ಔಟ್ ತೆಗೆದು, ಅದನ್ನ ನಿಮ್ಮೊಂದಿಗೆ ಇರಿಸಿಕೊಳ್ಳಿ.

Share.
Exit mobile version