ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ರೈಲ್ವೆ ಇಲಾಖೆ, ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಅರ್ಜಿ ಸಲ್ಲಿವುದಕ್ಕೆ ಇಂದು ನಾಳೆ ಕೊನೆ ದಿನಾಂಕವಾಗಿದ್ದು, ಈ ನಿಟ್ಟಿನಲ್ಲಿ ಈಗ ನಾವು ನಿಮಗಾಗಿ ಮಹತ್ವದ ಮಾಹಿತಿಯನ್ನು ನೀಡುತ್ತಿದ್ದೇವೆ. ಕೂಡಲೇ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನಿಟ್ಟಿನಲ್ಲಿ ನಿಮಗಾಗಿ ಇಲ್ಲಿದೆ ಮಾಹಿತಿ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಾದ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿ ಅಗತ್ಯ ಗ್ರೂಪ್ ಎ ಅಸಿಸ್ಟಂಟ್ ಕಮಾಂಡಂಟ್ -506 ಹುದ್ದೆಗಳಿಗೆ ಅಪ್ಲಿಕೇಶನ್ ಸಲ್ಲಿಸಲು ಇಂದು ಕೊನೆ ದಿನಾಂಕವಾಗಿದೆ. 14-05-2024 ರ 18-00 ಗಂಟೆವರೆಗೆ. ಅರ್ಜಿ ಸಲ್ಲಿಸಬಹುದಾಗಿದೆ. ಆರ್‌ಆರ್‌ಬಿ’ಯು ರೈಲ್ವೆ ಭದ್ರತಾ ಪಡೆಯ ರೈಲ್ವೆ ಸಬ್‌ಇನ್ಸ್‌ಪೆಕ್ಟರ್- 452 , ರೈಲ್ವೆ ಕಾನ್ಸ್‌ಟೇಬಲ್- 4208 ಹುದ್ದೆಗಳಿಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸ್ವೀಕಾರ ಮಾಡುವುದು ಇಂದೇ ಕೊನೆ ದಿನವಾಗಿದೆ.
9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಹೆಚ್‌ಕೆ ವೃಂದದ ವಿವಿಧ ಗ್ರೂಪ್ ಬಿ 327 ಹುದ್ದೆಗಳ ಅರ್ಜಿಗೆ ಇಂದೇ ಕೊನೆ ದಿನವಾಗಿದೆ. ಇಂದು ರಾತ್ರಿ 23-59 ಗಂಟೆಯೊಳಗೆ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗೆ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದಾದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ -247 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ನಡುವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 15, 2024 ರ ರಾತ್ರಿ 23-೦೦ ಗಂಟೆವರೆಗೆ ಅವಕಾಶ ಇರುತ್ತದೆ. ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚಿಸಿ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಮೇ 15, 2024 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 97 ಪಿಡಿಒ ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದಲ್ಲಿ 150 ಪಿಡಿಒ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಮೇ 15 ಕಡೆಯ ದಿನಾಂಕವಾಗಿದೆ.