ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಇಂದು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಅಂತ ತಿಳಿಸಿದೆ.

ದಿನಾಂಕ 02-07-2024 ರಿಂದ ದಿನಾಂಕ 03-07-2024ರವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಅಂತ ಮಾಹಿತಿ ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ರಾಜ್ಯದ ಜನರು ಅವಕಾಶವನ್ನು ಬಳಸಿಕೊಳ್ಳುವಂತೆ ತಿಳಿಸಿದೆ.

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

www.kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ
ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.

ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಅರ್ಜಿ ಶುಲ್ಕ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದ್ರೇ ಪಡಿತರ ಚೀಟಿ ಬಂದ ನಂತ್ರ, ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ.

Share.
Exit mobile version