Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ `ಕ್ರಿಶ್ಚಿಯನ್’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/10/2025 6:46 AM

‘ಪರ್ವೇಜ್ ಮುಷರಫ್ ಪಾಕ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಮೇರಿಕಾಕ್ಕೆ ಹಸ್ತಾಂತರಿಸಿದ್ದರು’: ಸಿಐಎ ಮಾಜಿ ಅಧಿಕಾರಿ

25/10/2025 6:45 AM

ಗಮನಿಸಿ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

25/10/2025 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ
KARNATAKA

ಗಮನಿಸಿ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

By kannadanewsnow5725/10/2025 6:44 AM

ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಎಲ್ಲಾ ಅರ್ಹ ಮತದಾರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಹಾಗೂ ಬಳ್ಳಾರಿ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು ಹಾಗೂ ಇತರೆ ತತ್ಸಮಾನ ಅಧಿಕಾರಿಯವರನ್ನು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರರನ್ನು ಸಹಾಯಕ ಮತದಾರರ ನೊಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ. ಅರ್ಹತಾ ದಿನಾಂಕ 01.11.2025 ಕ್ಕೆ ಅನ್ವಯಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.

ಭಾರತ ಚುನಾವಣಾ ಆಯೋಗವು ದಿನಾಂಕ 12.09.2025ರ ಪತ್ರದನ್ವಯ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ.

ವೇಳಾಪಟ್ಟಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ಕುರಿತು ವೇಳಾಪಟ್ಟಿಯನ್ನು ನಿಗಿಧಿಪಡಿಸಿದ್ದು ಈಗಾಗಲೇ ದಿನಾಂಕ:30.09.2025 ರಂದು ಸಾರ್ವಜನಿಕರ ಮಾಹಿತಿಗಾಗಿ ಪ್ರಚೂರಪಡಿಸಲಾಗಿದೆ. ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ಮತ್ತು ದಿನ 2025ರ ನವೆಂಬರ್ 6 ಆಗಿದ್ದು, ನವೆಂಬರ್ 25 ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಪ್ರಕಟವಾಗಲಿದೆ. ನವೆಂಬರ್ 25 ರಿಂದ ಡಿಸೆಂಬರ್ 10 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗಾಗಿ ನಿಗದಿಪಡಿಸಿದ ಅವಧಿಯಾಗಿದ್ದು, ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಆಗಲಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮಾರ್ಗಸೂಚಿಗಳು: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕೆಲವು ಮಾರ್ಗಸೂಚಿಗಳನ್ನು ಅನುಸರಿಸಬೇಕಾಗಿದ್ದು, ಅವುಗಳ ವಿವರ ಇಂತಿದೆ. ಭಾರತದ ಪ್ರಜೇಯಾಗಿರುವ, ಆಯಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025 ಕ್ಕೆ ಮೊದಲು 6 ವಷಗಳ ಅವಧಿಯಲ್ಲಿ ದರ್ಜೆಯಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ. ಹಾಗೇ ನಿರ್ಧಷ್ಟಪಡಿಸಿದ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯು ಮೊದಲನೇ ಅನುಸೂಚಿಯಲ್ಲಿ ತಿಳಿಸಲಾದ ಅಧಿಕಾರಿಗಳ ಬಳಿ ಇರುತ್ತದೆ.

ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾರೆಯಾಗಿ ಸಲ್ಲಿಸಿದ (BULK) ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಮತದಾರರ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು. ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಂಟುಂಬದ ಯಾವುದಾದರೂ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ, ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳಬೇಕು. ಅರ್ಜಿದಾರರು ನಮೂನೆ-19 ರ ಅರ್ಜಿಯೊಂದಿಗೆ ಆಧಾರ ಕಾರ್ಡ, ಚುನಾವಣಾ ಗುರುತಿನ ಚೀಟಿ ಹಾಗೂ ಬೀಳಿ ಬಣ್ಣದ ಹಿನ್ನೆಲೆ ಹೊಂದಿದ 2 ಪಾಸ್‌ಪೋರ್ಟ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿದಾರರು ನಮೂನೆ-19 ರೊಂದಿಗೆ ಲಗತ್ತಿಸಿದ ಆಧಾರ್ ಕಾರ್ಡನ ಗೌಪ್ಯತೆಯನ್ನು ಕಾಪಾಡುವ ದೃಷ್ಟಿಕೋನದಿಂದ ಆಧಾರ್ ಸಂಖ್ಯೆಯ ಪ್ರಥಮ 8 ಸಂಖ್ಯೆಯನ್ನು ಮಾಸ್ಕ್ ಮಾಡಲು ಹಾಗೂ ಅರ್ಜಿದಾರರ ಖಾಸಗಿತ್ವದ ದಾಖಲೆ ಹಾಗೂ ಮೊಬೈಲ್ ಸಂಖ್ಯೆಯನ್ನು ಯಾರಿಗೂ ನೀಡಬಾರದೆಂದು ಕಡ್ಡಾಯವಾಗಿ ಸೂಚಿಸಲಾಗಿರುತ್ತದೆ.

ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದೆಂಬುದನ್ನು ಗಮನಿಸಬೇಕು. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನವೇಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಭೋದನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2 ರಲ್ಲಿ ಸಂಬಳ ಬಟವಾಡೆ ಅಧಿಕಾರಿಯಿಂದ (Drawing Officer) ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.

ಚುನಾವಣಾ ಆಯೋಗವು ದಿನಾಂಕ:25.10.2021 ರಂದು ನೀಡಿದ ಮಾರ್ಗಸೂಚಿಗನುಗುಣವಾಗಿ ಅರ್ಹ ಮತದಾರರು ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳದಲ್ಲಿ ನೋಂದಾಯಿಸಕೂಡದೆಂದು ತಿಳಿಸುತ್ತಾ, ಅವರು ಸಾಮಾನ್ಯ ನಿವಾಸಿಯಾಗಿ ವಾಸಿಸುತ್ತಿರುವ ಸ್ಥಳೀಯ ಕ್ಷೇತ್ರದಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ತಿಳಿಸಿದೆ. ಅವರು ಈ ಕ್ಷೇತ್ರ ವ್ಯಾಪ್ತಿಯ ಹೊರಗಡೆ ಸೆಕಂಡರಿ ಶಿಕ್ಷಣ ಸಂಸ್ಥೆಗಳಿಗಿಂತಲೂ ಕಡಿಮೆ ಇಲ್ಲದ ಶಿಕ್ಷಣ. ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ಮತದಾರನಾಗಲು ಆಯೋಗದ ಮಾರ್ಗಸೂಚಿಗಳನ್ನು ಪೂರೈಸಿ ಚುನಾವಣಾ ಕ್ಷೇತ್ರ ವ್ಯಾಪ್ತಿಯ ಸಾಮಾನ್ಯ ನಿವಾಸಿಯಾಗಿ ಇದಕ್ಕೆ ಪೂರವಾಗಿರುವಂತಹ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಗಾಗಿ ಅರ್ಹರಿರುತ್ತಾರೆ. ಆಯೋಗವು ಮುಂಬರುವ ದಿನಗಳಲ್ಲಿ ಸದರಿ ನಮೂನೆ 19ರ ಅರ್ಜಿಗಳನ್ನು ERMS ನಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ. ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತದ ಮತದಾರರ ಪಟ್ಟಿ ಸಿದ್ದಪಡಿಸಿಕೊಳ್ಳುವ ಕುರಿತು ಹಾಗೂ ಚುನಾವಣಾ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಈಗಾಗಲೇ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಈ ಕಾರ್ಯಾಲಯದಿಂದ ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸೀಲ್ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು.

ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕೆಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Note: Permission to add names to the electoral roll of teachers' constituencies
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ `ಕ್ರಿಶ್ಚಿಯನ್’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/10/2025 6:46 AM1 Min Read

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

25/10/2025 6:38 AM1 Min Read

BREAKING : ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

25/10/2025 6:35 AM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ `ಕ್ರಿಶ್ಚಿಯನ್’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/10/2025 6:46 AM

‘ಪರ್ವೇಜ್ ಮುಷರಫ್ ಪಾಕ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಮೇರಿಕಾಕ್ಕೆ ಹಸ್ತಾಂತರಿಸಿದ್ದರು’: ಸಿಐಎ ಮಾಜಿ ಅಧಿಕಾರಿ

25/10/2025 6:45 AM

ಗಮನಿಸಿ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

25/10/2025 6:44 AM

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

25/10/2025 6:38 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ `ಕ್ರಿಶ್ಚಿಯನ್’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

By kannadanewsnow5725/10/2025 6:46 AM KARNATAKA 1 Min Read

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳಯಡಿ ಸಾಲ ಸೌಲಭ್ಯ ಪಡೆಯಲು ಆನ್ಲೈಾನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕ್ರಿಶ್ಚಿಯನ್ ಸಮುದಾಯದ…

ಗಮನಿಸಿ : ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

25/10/2025 6:44 AM

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

25/10/2025 6:38 AM

BREAKING : ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

25/10/2025 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.