ಹಾವೇರಿ: ಭಾರತ ಚುನಾವಣಾ ಆಯೋಗವು ವಿಧಾನಸಭಾ, ಲೋಕಸಭಾ ಮತ ಕ್ಷೇತ್ರದ ಮತದಾರ ಪಟ್ಟಿ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆ ತರಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1950 ಜನ ಪ್ರಾತಿನಿಧ್ಯ ಕಾಯಿದೆಯ ಶಿಕ್ಷನ 14(ಬಿ) ಮತ್ತು ಸೆಕ್ಷನ್ 23 ರಲ್ಲಿನ ಕಾನೂನು ತಿದ್ದುಪಡಿಗಳ ಅನುಸಾರವಾಗಿ ಮತ್ತು ಮತದಾರರ ನೋಂದಣಿ ನಿಯಮಗಳು, 1960 ರಲ್ಲಿನ ಮಾರ್ಪಾಡುಗಳ ಅನುಸಾರವಾಗಿ ಭಾರತದ ಚುನಾವಣಾ ಆಯೋಗವು ವಿಧಾನಸಭೆ, ಲೋಕಸಭೆ ಮತಕ್ಷೇತ್ರದ ಮತದಾರರ ಪಟ್ಟಿಯ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಚುನಾವಕಾ ಸುಧಾರಣೆಗಳು ಮತ್ತು ಅದರ ಪ್ರಮುಖ ಮುಖ್ಯಾಂಶಗಳು ಕೆಳಕಂಡಂತಿವೆ
ಮತದಾರರ ಪಟ್ಟಿಯ ಭಾಗವಾಗಲು ಯುವ ಸಮುದಾಯಕ್ಕೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಾಗಿದೆ. ಮತದಾರರ ಪಟ್ಟಿಗೆ ನೋಂದಾಯಿಸಲು ವರ್ಷದಲ್ಲಿ ನಾಲ್ಕು ಅವಕಾಶಗಳು – ಮೊದಲಿದ್ದಂತೆ ಅರ್ಹತಾ ದಿನಾಂಕವಾದ ಜನವರಿ 01 ರವರೆಗೂ ಕಾಯಬೇಕಾಗಿಲ್ಲ. 17+ ವಯಸ್ಸಿನ ಯುವಕರಿಗೆ ಮುಂಗಡ ಅರ್ಜಿ ಸಲ್ಲಿಸುವ ಸೌಲಭ್ಯವಿದೆ. ದಿನಾಂಕ 01-08-2002 ರಿಂದ ಮತದಾರರ ನೋಂದಣಿಗಾಗಿ ಹೊಸ ಸರಳೀಕರಿಸಿದ ಅರ್ಜಿ ನಮೂನೆಗಳು , ಮತದಾರರ ಪಟ್ಟಿಯ ಹೆಸರು, ಇನ್ನಿತರ ತಿದ್ದುಪಡಿಗಳಿಗಾಗಿ ಹೊಸ ನಮೂನೆ 8 ಲಭ್ಯ. ಮತದಾರರ ಪಟ್ಟಿಗೆ ಸ್ವಯಂಪ್ರೇರಿತ ಆಧಾರ್ ಜೋಡಗ ಸೌಲಭ್ಯ, ಒಂದೇ ತರಹದ ಹೆಸರು, ಪೋಟೋ ನಮೂದುಗಳನ್ನು ಹೊಂದಿರುವ ಮತದಾರರ ಪರಿಶೀಲನೆಗೆ ಆದ್ಯತೆ, ಮತದಾರರ ಪಟ್ಟಿ ಪೂರ್ವ ಪರಿಷ್ಕರಣಿ ಆಗಸ್ಟ್ ತಿಂಗಳಿನಲ್ಲಿ ಪ್ರಾರಂಭ, ಆರೋಗ್ಯಕರ ಮತದಾರರ ಪಟ್ಟಿಯನ್ನು ಖಾತರಿಪಡಿಸುವ ಉದ್ದೇಶದಿಂದ ಪರಿಶೀಲನೆ ಮತ್ತು ಮೇಲ್ವಿಚಾರಣೆ ಮೇಲಿನ ತಿದ್ದುಪಡಿಗಳು ದಿನಾಂಕ 01-08-2022 ರಿಂದ ಜಾರಿಗೆ ಬರಲಿದೆ.
BREAKING NEWS: ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್
ಜನತಾ ಪ್ರಾತಿನಿಧ್ಯ ಕಾಯಿದೆ 1950 ರ ಪ್ರಕರಣ 14(ಬಿ) ಮತ್ತು ಮತದಾರರ ನೋಂದಣಿ ನಿಯಮಗಳು 1960 ರಲ್ಲಿ ಸೂಕ್ತ ತಿದ್ದುಪಡಿ ಮಾಡಲಾಗಿದೆ. ಅದರಂತೆ, ಪ್ರಸ್ತುತ ಜಾರಿಯಲ್ಲಿರುವ ಜನವರಿ 01ರ ಅರ್ಹತಾ ದಿನಾಂಕದ ಜೊತೆಗೆ 01ನೇ ಏಪ್ರಿಲ್, 01ನೇ ಜುಲೈ ಮತ್ತು 01ನೇ ಅಕ್ಟೋಬರ್ ರಂದು ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮುಂದೆ ಮತದಾರರ ಪಟ್ಟಿಯನ್ನು ಪತಿ ತ್ರೈಮಾಸಿಕದಲ್ಲಿ ಕಾಲೋಚಿತಗೊಳಿಸಲಾಗುವುದು. ಇದರಿಂದ ಆ ತ್ರೈಮಾಸಿಕದಲ್ಲಿ 18 ವರ್ಷ ತುಂಬುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಜೊತೆ ಮತದಾರರ ಭಾವಚಿತ್ರದ ಗುರುತಿನ ಚೀಟಿಯನ್ನು ಸಹ ವಿತರಿಸಲಾಗುವುದು.
ಪ್ರಸಕ್ತ 2023ರ ವಾರ್ಷಿಕ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ 01ನೇ ಏಪ್ರಿಲ್, 01 ಜುಲೈ ಮತ್ತು 01ನೇ ಅಕ್ಟೊಬರ್ 2022ಕ್ಕೆ 18 ವರ್ಷ ತುಂಬುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮುಂಗಡ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದರಿಂದ 18 ವರ್ಷಗಳನ್ನು ಪೂರೈಸಿದ ಯುವಕರು ನೋಂದಣಿಗಾಗಿ ಮುಂದಿನ ವರ್ಷದ ವಿಶೇಷ ಪರಿಷ್ಕರವರೆಗೆ ಕಾಯುವುದನ್ನು ತಪ್ಪಿಸಲಾಗಿದೆ ಮತ್ತು ಮಧ್ಯಂತರ ಅವಧಿಯಲ್ಲಿ ನಡೆಯುವ ಚುನಾವಣೆಗಳಲ್ಲಿ ಮತ ಚಲಾವಣೆ ಅವಕಾಶ ದೊರೆಯಲಿದೆ.
BIG NEWS: ರಾಜ್ಯದ ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ‘ಹೊಸ ಶಾಲೆ ಆರಂಭ’ಕ್ಕೆ ‘ಸರ್ಕಾರ ಗ್ರೀನ್ ಸಿಗ್ನಲ್’
ಈ ಮೊದಲು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ವಿಧಾನ ಸಭಾ ಕ್ಷೇತ್ರಕ್ಕೆ ಮತದಾರರ ವರ್ಗಾವಣೆಗಾಗಿ ನಮೂನೆ -6 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿತ್ತು. ಇದನ್ನು ಪರಿಷ್ಕರಿಸಿ ಸಮೂನೆ-6ರಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಮಾತ್ರ ಸೀಮಿತಗೊಳಿಸಲಾಗಿದೆ.
ನಮೂನೆ-7: ಮತದಾರರ ಪಟ್ಟಿಯಲ್ಲಿ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ ಮತ್ತು ಹೆಸರು ತೆಗೆದು ಹಾಕಲು ಚಾಲ್ತಿಯಲ್ಲಿರುವ ನಮೂನೆ-7ಅನ್ನು ಪರಿಷ್ಕರಿಸಲಾಗಿದೆ. ಇದರಿಂದ ಮರಣ, 18 ವರ್ಷ ಆಗದಿರುವುದು. ಈಗಾಗಲೇ ಬೇರೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಮತ್ತು ಭಾರತದ ಪ್ರಜೆಯಲ್ಲದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದರೆ ತೆಗೆಯಲು ನಮೂನೆ-7ರಲ್ಲಿ ಅವಕಾಶ ಕಲ್ಪಿಸಿ ಪರಿಷ್ಕರಿಸಲಾಗಿದೆ. ಇದರ ಜೊತೆಗೆ ಮರಣ ಪ್ರಮಾಣಪತ್ರ ಲಗತ್ತಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
BREAKING NEWS: ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ ರದ್ದು
ನಮೂನೆ-8: ಈ ಮೊದಲು ನಮೂನೆ-8ರಲ್ಲಿ ಮತದಾರರ ಪಟ್ಟಿಯಲ್ಲಿನ ಮತದಾರರ ಹೆಸರು, ವಿಳಾಸ ಮತ್ತು ಭಾವಚಿತ್ರಗಳಿಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲು ಅವಕಾಶವಿತ್ತು, ಪ್ರಸ್ತುತ ಪರಿಷ್ಕತ ನಮೂನೆ 8 ರನ್ವಯ ಮತದಾರರ ಹೆಸರು, ವಿಳಾಸ ಮತ್ತು ಭಾವಚಿತ್ರಗಳಿಗೆ ಬಂಧಿಸಿದಂತೆ ತಿದ್ದುಪಡಿ ಜೊತೆಗೆ ಒಂದು ವಿಧಾನಸಭಾ ಕ್ಷೇತ್ರದಿಂದ ಬೇರೆ ವಿಧಾನಸಭಾ ಕ್ಷೇತ್ರಕ್ಕೆ ವರ್ಗಾವಣೆ, ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ವರ್ಗಾವಣೆ, ಬದಲಿ ಎಪಿಕ್ ಗಾಗಿ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರ ತಮ್ಮ ಅಂಗವೈಕಲ್ಯ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಮೊದಲು ಒಂದು ವಿಧಾನಸಭಾ ಕ್ಷೇತ್ರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಸ್ಥಳಾಂತರಕ್ಕಾಗಿ ಚಾಲ್ತಿಯಲ್ಲಿದ್ದ ಅರ್ಜಿ ನಮೂನೆ- 8ಎ ಯನ್ನು ರದ್ದುಪಡಿಸಲಾಗಿದೆ.
ನಮೂನೆ- 8ಎ ರಲ್ಲಿದ್ದ ಸೌಲಭ್ಯವನ್ನು ಪರಿಷ್ಕರಿಸಿದ ನಮೂನೆ-8ರಲ್ಲಿ ಒದಗಿಸಲಾಗಿದೆ. ಈ ಮೊದಲು ಬದಲಿ ಎಪಿಕ್ಗಾಗಿ ನಮೂನೆ-001ರಲ್ಲಿ ಅರ್ಜಿ ಸಲ್ಲಿಸಲು ಇದ್ದ ಅವಕಾಶವನ್ನು ರದ್ದುಪಡಿಸಿ, ಸದರಿ ಅವಕಾಶವನ್ನು ಪರಿಷ್ಕರಿಸಿದ ನಮೂನೆ-8ರಲ್ಲಿ ಒದಗಿಸಲಾಗಿದೆ.
ನಮೂನೆ-6ಬಿ: ಮತದಾರರ ಪಟ್ಟಿಯಲ್ಲಿನ ಮತದಾರರನ್ನು ದೃಡೀಕಣವ, ಉದ್ದೇಶದಿಂದ ಹೊಸವಾಗಿ ನಮೂನೆ-6ಬಿ ಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿ ದೃಢೀಕರಿಸಲು ಅವಕಾಶ ನೀಡಲಾಗಿದೆ. ಇದು ಮತದಾರರಿಗೆ ಸ್ವಯಂಪ್ರೇರಿತ ಅವಕಾಶವಿದ್ದು ಆಕಸ್ಮಾತ್ ಆಧಾರ್ ಮಾಹಿತಿ ಒದಗಿಸಲು ಸಾಧ್ಯವಾಗದಿದ್ದಲ್ಲಿ ಈ ಕೆಳಗಿನ 11 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಒದಗಿಸಿ ದಿನಾಂಕ 01-08- 2002 ರಿಂದ ದಿನಾಂಕ 31-03-2023ರ ಒಳಗೆ ದೃಢೀಕರಿಸಲು ಅವಕಾಶ ಕಲ್ಪಿಸಲಾಗಿದೆ.