ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ, ಮರು ಎಣಿಕೆಗೆ ಇಂದು ರಾತ್ರಿ 12 ಗಂಟೆವರೆಗೆ ಅವಕಾಶ ನೀಡಲಾಗಿದೆ.
2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿಸಲ್ಲಿಸಲು ದಿನಾಂಕ:20-04-2024ರಂದು ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು, ಸದರಿ ದಿನಾಂಕವನ್ನು ವಿಸ್ತರಿಸಿ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿಸಲ್ಲಿಸಲು ದಿನಾಂಕ:21-04-2024ರ ಭಾನುವಾರ ರಾತ್ರಿ 12.00 ಗಂಟೆಯವರೆಗೆ ಅವಕಾಶ ನೀಡಲಾಗಿದೆ, ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಿಸಕೊಳ್ಳಬಹುದಾಗಿದೆ.