ಚಿತ್ರದುರ್ಗ : ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ವ್ಯಾಪಾರಿಗಳು ಪ್ರತ್ಯೇಕವಾಗಿ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ.
ಪುರಸಭೆಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ಮಾಹಿತಿಗಳೊಂದಿಗೆ, ಅರ್ಜಿ ಶುಲ್ಕ ರೂ.500/- ಆಗಿದ್ದು, 1 ವರ್ಷ ಚಾಲ್ತಿಯಲ್ಲಿರುತ್ತದೆ. ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬಾಡಿಗೆ ಕರಾರು ಪತ್ರ, ಉದ್ಯಮ ಪರವಾನಿಗೆ, ಉದ್ಯಮ ಫೋಟೋ ಹಾಗೂ ಮಾಲೀಕರ ಫೋಟೋ ದಾಖಲೆಗಳು ಬೇಕು. ಡಿ.15ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ದಂಡ ವಿಧಿಸುವುದಲ್ಲದೆ ಉದ್ದಿಮೆ ಪರವಾನಿಗೆಯನು ಸಹ ರದ್ದುಪಡಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ರಾಜ್ಯದ ಪರಿಶಿಷ್ಟ ಜಾತಿಯ ಯುವಕರ ಗಮನಕ್ಕೆ: ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
BREAKING ; ಡಿಸೆಂಬರ್ 13, 14 ರಂದು ಲೋಕಸಭೆಯಲ್ಲಿ ‘ಸಂವಿಧಾನ’ ಮೇಲಿನ ಚರ್ಚೆ, ಸರ್ವಪಕ್ಷಗಳು ಭಾಗಿ
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ