ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 8 ಫಲಾನುಭವಿ ಆಧಾರಿತ ಯೋಜನೆಗಳನ್ನು ಡಿಬಿಟಿ(ನೇರ ನಗದು ವರ್ಗಾವಣೆ) ಮೂಲಕ ಪಾವತಿಸುವ ಸಂಬಂಧ 2022-23 ನೇ ಸಾಲಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಪ್ರೋತ್ಸಾಹ ಧನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಆಧಾರ, ಸಾಧನೆ, ಪ್ರತಿಭೆ ಮತ್ತು ಮರಣ ಪರಿಹಾರ ನಿಧಿ ಯೋಜನೆ ಈ 8 ಯೋಜನೆಯಡಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್, 15 ಕೊನೆಯ ದಿನವಾಗಿದೆ. ಅರ್ಹರು https://sevasindhu.karnataka.gov.in ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯ ಪ್ರತಿ ಸ್ವೀಕೃತಿ ಪತ್ರದೊಂದಿಗೆ ಕಚೇರಿಗೆ ಅಥವಾ ತಾಲ್ಲೂಕು ಪಂಚಾಯತ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ತಾಲ್ಲೂಕು ಪಂಚಾಯತ್, ಮಡಿಕೇರಿ 8073192914, ಸೋಮವಾರಪೇಟೆ 9008685129, ವಿರಾಜಪೇಟೆ 9900883654 ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂ.ಸಂ. 08272-295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲಾ ಅವರು ತಿಳಿಸಿದ್ದಾರೆ