ಬೆಂಗಳೂರು: 2023ರ ಮಾರ್ಚ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ( SSLC Main Exam 2023 ) ನಡೆಯಲಿದೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ –ಕಾಲೇಜುಗಳಿಂದ ( School and College ) ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕವನ್ನು ವಿಸ್ತರಿಸಿ, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆದೇಶಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವಂತ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು, 2023ನೇ ಮಾರ್ಚ್ ನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ( SSLC Examination 2023 ) ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ವೀದ್ಯಾರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ ಲೈನ್ ಮುಖಾಂತರ ನೋಂದಾಯಿಸಲು ದಿನಾಂಕವನ್ನು ನಿಗದಿ ಪಡಿಸಿ ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ.
ಇದೀಗ ರಾಜ್ಯದ ಕೆಲ ಶಾಲೆಗಳಿಂದ ಪೋಷಕರಿಂದ ಮಂಡಳಿಗೆ ದೂರವಾಣಿ ಮೂಲಕ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕ ವಿಸ್ತರಿಸುವಂತೆ ಕೋರಿದ್ದಾರೆ. ಹೀಗಾಗಿ ಇಂದು ಎಸ್ ಎಲ್ ಎಲ್ ಸಿ ಮುಖ್ಯ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಇದ್ದಂತ ಕೊನೆಯ ದಿನಾಂಕವನ್ನು, 10-11-2022ರಕ್ಕೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.