ಬೆಂಗಳೂರು : ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ ಮಧ್ಯಮ/ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ.
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು. 50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ https://skillconnect.kaushalkar.com ಲಿಂಕ್ ನಲ್ಲಿ ಅರ್ಕಿ ಸಲ್ಲಿಸಬಹುದಾಗಿದೆ.