ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂ.27 ರಿಂದ ಸೆ. 15ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದು, ಸೆಪ್ಟೆಂಬರ್.15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ಮಳೆಯ ಕಾರಣದಿಂದ ನಿಷೇಧಿಸಲಾಗಿದೆ. ಬದಲಿ ಮಾರ್ಗ ತೀರ್ಥಹಳ್ಳಿ –ಉಡುಪಿಗೆ ತೀರ್ಥಹಳ್ಳಿ- ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದ ಮೂಲಕ ಸಂಚಾರ ಮಾಡುವಂತೆ ತಿಳಿಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ಪ್ರಮುಖ ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ
ಹಾವೇರಿ ಅಪಘಾತ ಪ್ರಕರಣ :ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ