ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂ.27 ರಿಂದ ಸೆ. 15ರವರೆಗೆ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದು, ಸೆಪ್ಟೆಂಬರ್.15ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ಮಳೆಯ ಕಾರಣದಿಂದ ನಿಷೇಧಿಸಲಾಗಿದೆ. ಬದಲಿ ಮಾರ್ಗ ತೀರ್ಥಹಳ್ಳಿ –ಉಡುಪಿಗೆ ತೀರ್ಥಹಳ್ಳಿ- ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದ ಮೂಲಕ ಸಂಚಾರ ಮಾಡುವಂತೆ ತಿಳಿಸಿದ್ದಾರೆ.

BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

ಹಾವೇರಿ ಅಪಘಾತ ಪ್ರಕರಣ :ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Share.
Exit mobile version