ಶಿವಮೊಗ್ಗ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 06ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-249241 ಅಥವಾ ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆ, ಅಥವಾ http://kreis.kar.nic.in, http://kea.kar.nic.in ವೆಬ್ಸೈಟ್ಗಳ ಮಾಹಿತಿ ಪುಸ್ತಕ-2024ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ʻಪರಿಶಿಷ್ಟ ಜಾತಿಯ ಉದ್ದಿಮೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ʻMSMEʼ ಘಟಕ ಸ್ಥಾಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಶಾಲಾ ವಾಹನಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರ ಪೊಲೀಸ್ ವೆರಿಫಿಕೇಷನ್ ಕಡ್ಡಾಯ: ರಾಜ್ಯ ಸರ್ಕಾರ ಸೂಚನೆ