Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಗ್ಯಾಸ್ ಸಂಕಷ್ಟಕ್ಕೆ ತತ್ತರಿಸಿದ ಹೋಟೆಲ್ ಉದ್ಯಮ : ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಹೋಟೆಲ್ ಸಿಬ್ಬಂದಿ!

14/03/2026 10:19 AM

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : 15 ವರ್ಷದ ಮಗಳಿಗೆ 5-6 ಸಾವಿರ ಫಿಕ್ಸ್ ಮಾಡಿ ವೇಶ್ಯಾವಾಟಿಕೆ ತಳ್ಳಿದ ತಾಯಿ!

14/03/2026 10:10 AM

ಬೆಂಜಮಿನ್ ನೆತನ್ಯಾಹು ಸಾವು ಕೇವಲ ವದಂತಿ: ವೈರಲ್ ಆದ ಫೋಟೋಗಳು ‘AI ಸೃಷ್ಟಿ’, ಸುಳ್ಳು ಸುದ್ದಿ ನಂಬಬೇಡಿ: ಮೂಲಗಳು

14/03/2026 9:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ.!
KARNATAKA

ಗಮನಿಸಿ : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ.!

By kannadanewsnow5706/10/2025 6:47 AM

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದೆ. ನಮೂನೆ-18 ರಲ್ಲಿ  ಮತಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಮತದಾರ ಪಟ್ಟಿ ತಯಾರಿಕೆಗೆ ವೇಳಾಪಟ್ಟಿ ನಿಗಧಿಪಡಿಸಿದ್ದಾರೆ. 1 ನವೆಂಬರ್ 2025 ಕ್ಕೆ ಇದ್ದಂತೆ ಮತದಾರರ ಪಟ್ಟಿ ಸಿದ್ದಪಡಿಸಲಾಗವುದು. ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು, ನಗರಸಭೆ ವ್ಯಾಪ್ತಿಯಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ ಹಾಗೂ ನಿರ್ಧಿಷ್ಟಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಮತದಾರ ಪಟ್ಟಿ ತಯಾರಿಕೆಗೆ ಸೆ.30 ರಂದು ಅಧಿಸೂಚನೆ  ಹೊರಡಿಸಲಾಗಿದೆ. ಅಕ್ಟೋಬರ್ 15 ರಂದು ಮೊದಲ ಬಾರಿಗೆ ಹಾಗೂ 25 ರಂದು ಎರಡನೇ ಬಾರಿಗೆ ಅಧಿಸೂಚನೆಯನ್ನು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಲಾಗುವುದು. ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕಡೆಯ ದಿನವಾಗಿದೆ. ನವೆಂಬರ್ 20 ವರೆಗೆ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗುವುದು. ನವೆಂಬರ್ 25 ರಂದು ಕರಡು ಪ್ರತಿ ಪ್ರಕಟಿಸಿ ಆಕ್ಷೇಪಣೆ ಆಹ್ವಾನಿಸಲಾಗುವುದು. ಡಿಸೆಂಬರ್ 10 ಆಕ್ಷೇಪಣೆಗಳನ್ನು ಸಲ್ಲಿಸಲು ಕಡೆಯ ದಿನವಾಗಿದೆ. ಡಿಸೆಂಬರ್ 25ರ ಒಳಗೆ ಆಕ್ಷೇಪಣೆಗಳ ವಿಲೇವಾರಿಗೆ ಕ್ರಮ ವಹಿಸಲಾಗುವುದು. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಹೆಸರು ನೊಂದಾಯಿಸಲು  ದಾಖಲೆಗಳು ಕಡ್ಡಾಯ

2022ರ ನವಂಬರ್  1ಕ್ಕೂ ಮುನ್ನ ಯಾವುದೇ ಪದವಿ ಪಡೆದ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರು

ನಿಗದಿತ ನಮೂನೆಯ ಜೊತೆಗೆ ಗೆಜೆಟೆಡ್ ಅಧಿಕಾರಿಯಂದ ದೃಢೀಕರಿಸಿದ

1- ಆಧಾರ್ ಕಾರ್ಡ್

2-ವೋಟರ್ ಐಡಿ

3-ಎಸ್ ಎಸ್ ಎಲ್ ಸಿ ಅಂಕಪಟ್ಟಿ

4-ಪದವಿ ಪ್ರಮಾಣ ಪತ್ರದ ನಕಲು ಜೊತೆಗೆ

5-ಒಂದು ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿ ಜೊತೆ ಲಗತ್ತಿಸಬೇಕು

6- ಮತದಾರರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

ಪದವಿಧರ ಕ್ಷೇತ್ರದ ಸಾಮಾನ್ಯ ನಿವಾಸಿಯಾಗಿರಬೇಕು. 1 ನವೆಂಬರ್ 2025 ನಿರ್ಧಿಷ್ಟಪಡಿಸಿದ ಅರ್ಹ ದಿನಾಂಕವಾಗಿದ್ದು, ಇದಕ್ಕೂ ಕನಿಷ್ಟ 3 ವರ್ಷಗಳ ಮೊದಲು ರಾಜ್ಯ ಸರ್ಕಾರ ಅಧಿಸೂಚಿಸಿರುವ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ಅದಕ್ಕೆ ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.

ವಿದ್ಯಾರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್, ಕಿಸಾನ್ ಅಥವಾ ಅಂಚೆ ಕಚೇರಿ ಚಾಲ್ತಿ ಖಾತೆಯ ಪಾಸ್ ಬುಕ್ ಅಥವಾ ಚುನಾವಣೆ ಆಯೋಗ ನಿಗದಿಪಡಿಸಿದ ಇತರೆ ದಾಖಲೆಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ನಮೂನೆ-18 ಅರ್ಜಿಯೊಂದಿಗೆ ವಾಸಸ್ಥಳ ವ್ಯಾಪ್ತಿಯ ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ ನಿರ್ದಿಷ್ಟಪಡಿಸಿದ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಚುನಾವಣಾ ಆಯೋಗದ ವೆಬ್‍ಸೈಟ್ http://eci.gov.in/files/category/356-forms-for-registration-in-eroll/   ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್https://ceo.karnataka.gov.in/20/download-forms/en  ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು. ಜಿಲ್ಲಾಧಿಕಾರಿ ಹಾಗೂ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿಯೂ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಸಹಾಯ ಕೇಂದ್ರಗಳ ಕಛೇರಿ ದೂರವಾಣಿ ಸಂಖ್ಯೆ:

ಮತದಾರರ ಪಟ್ಟಿ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಖ್ಯೆ 08194-220720, ಉಪವಿಭಾಗಾಧಿಕಾರಿ ಕಚೇರಿ ಸಂಖ್ಯೆ 08194-200342, ಮೊಳಕಾಲ್ಮೂರು ತಾಲ್ಲೂಕು ಕಚೇರಿ ಸಂಖ್ಯೆ 08198-229234, ಚಳ್ಳಕೆರೆ ತಾಲ್ಲೂಕು ಕಚೇರಿ ಸಂಖ್ಯೆ 08195-250648, ಚಿತ್ರದುರ್ಗ ತಾಲ್ಲೂಕು ಕಚೇರಿ ಸಂಖ್ಯೆ 08914-222416, ಹಿರಿಯೂರು ತಾಲ್ಲೂಕು ಕಚೇರಿ ಸಂಖ್ಯೆ 08193-263226, ಹೊಸದುರ್ಗ ತಾಲ್ಲೂಕು ಕಚೇರಿ ಸಂಖ್ಯೆ 08199-230224, ತಾಲ್ಲೂಕು ಕಚೇರಿ ಸಂಖ್ಯೆ 0891-200013 ಕರೆ ಮಾಡಬಹುದು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಚುನಾವಣೆ ತಹಶೀಲ್ದಾರ್ ನಾಗವೇಣಿ, ಚುನಾವಣೆ ಶಿರಸ್ತೇದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಕಾರ್ಯದರ್ಶಿ ಸಿ.ಜೆ.ನಾಸೀರುದ್ದೀನ್ ಮುಖಂಡ ಪ್ರಕಾಶ್ ರಮಾನಾಯ್ಕ್, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಬಿ.ಜೆ.ಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಯಶವಂತ್ ಕುಮಾರ್ ಇದ್ದರು.

Note: These documents are mandatory for adding your name to the voters' list for a graduate constituency!
Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಗ್ಯಾಸ್ ಸಂಕಷ್ಟಕ್ಕೆ ತತ್ತರಿಸಿದ ಹೋಟೆಲ್ ಉದ್ಯಮ : ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಹೋಟೆಲ್ ಸಿಬ್ಬಂದಿ!

14/03/2026 10:19 AM1 Min Read

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : 15 ವರ್ಷದ ಮಗಳಿಗೆ 5-6 ಸಾವಿರ ಫಿಕ್ಸ್ ಮಾಡಿ ವೇಶ್ಯಾವಾಟಿಕೆ ತಳ್ಳಿದ ತಾಯಿ!

14/03/2026 10:10 AM1 Min Read

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

14/03/2026 9:34 AM2 Mins Read
Recent News

ರಾಜ್ಯಾದ್ಯಂತ ಗ್ಯಾಸ್ ಸಂಕಷ್ಟಕ್ಕೆ ತತ್ತರಿಸಿದ ಹೋಟೆಲ್ ಉದ್ಯಮ : ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಹೋಟೆಲ್ ಸಿಬ್ಬಂದಿ!

14/03/2026 10:19 AM

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : 15 ವರ್ಷದ ಮಗಳಿಗೆ 5-6 ಸಾವಿರ ಫಿಕ್ಸ್ ಮಾಡಿ ವೇಶ್ಯಾವಾಟಿಕೆ ತಳ್ಳಿದ ತಾಯಿ!

14/03/2026 10:10 AM

ಬೆಂಜಮಿನ್ ನೆತನ್ಯಾಹು ಸಾವು ಕೇವಲ ವದಂತಿ: ವೈರಲ್ ಆದ ಫೋಟೋಗಳು ‘AI ಸೃಷ್ಟಿ’, ಸುಳ್ಳು ಸುದ್ದಿ ನಂಬಬೇಡಿ: ಮೂಲಗಳು

14/03/2026 9:36 AM

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

14/03/2026 9:34 AM
State News
KARNATAKA

ರಾಜ್ಯಾದ್ಯಂತ ಗ್ಯಾಸ್ ಸಂಕಷ್ಟಕ್ಕೆ ತತ್ತರಿಸಿದ ಹೋಟೆಲ್ ಉದ್ಯಮ : ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ಹೋಟೆಲ್ ಸಿಬ್ಬಂದಿ!

By kannadanewsnow0514/03/2026 10:19 AM KARNATAKA 1 Min Read

ಬೆಂಗಳೂರು : ಕರ್ನಾಟಕದಾದ್ಯಂತ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್…

SHOCKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : 15 ವರ್ಷದ ಮಗಳಿಗೆ 5-6 ಸಾವಿರ ಫಿಕ್ಸ್ ಮಾಡಿ ವೇಶ್ಯಾವಾಟಿಕೆ ತಳ್ಳಿದ ತಾಯಿ!

14/03/2026 10:10 AM

ಗೃಹಿಣಿಯರೇ ಗಮನಿಸಿ: ಸಿಲಿಂಡರ್ ಬೇಗ ಖಾಲಿಯಾಗ್ತಿದೆಯೇ? ಗ್ಯಾಸ್ ಉಳಿಸಲು ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ!

14/03/2026 9:34 AM

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 80 ಕೋಟಿ ಮೌಲ್ಯದ ಸರಕಾರಿ ಜಮೀನು ಮರು ವಶ

14/03/2026 9:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.