ದೇಶದಾದ್ಯಂತ ಪ್ರಾರಂಭವಾಗಿರುವ ಕೇಂದ್ರ ಸರಕಾರದ ಯೋಜನೆಯಾಗಿರುವ ರಾಷ್ಟ್ರೀಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮ ಧಾರವಾಡ ಜಿಲ್ಲೆಯಲ್ಲಿಯೂ ಆರಂಭವಾಗಿದೆ. ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮಗಳನ್ನು ಪರಿಚಯಿಸಲಾಗುತ್ತಿದೆ. ರಾಷ್ಟ್ರೀಯ ಟೆಲಿ ಮಾನಸಿ ಯೋಜನೆಯ ಉಚಿತ ಸಹಾಯವಾಣಿ ಸಂಖ್ಯೆ: 14416 ಅಥವಾ 18008914416 ಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದು, ಆಸಕ್ತರು ಕರೆ ಮಾಡಬಹುದು.
ಟೆಲಿ-ಮನಸ್
ವ್ಯಥೆಗೆ ಒಳಪಟ್ಟವರು, ಪರೀಕ್ಷಾ ಒತ್ತಡಕ್ಕೊಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆಗಳು, ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕಶಕ್ತಿ ತೊಂದರೆಯುಳ್ಳವರು, ಆರ್ಥಿಕ ಒತ್ತಡದಲ್ಲಿರುವವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಶುಲ್ಕರಹಿತ ದೂರವಾಣಿ ಸಂಖ್ಯೆ: 14416 ಅಥವಾ 18008914416 ಗೆ ಕರೆ ಮಾಡಬಹುದು ಎಂದು ಡಿಮ್ಹಾನ್ಸ್ನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.