Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೆಡಿಯುಗೆ ನಿತೀಶ್ ಪುತ್ರ ನಿಶಾಂತ್ ಎಂಟ್ರಿ: ನಾಳೆ ಅಧಿಕೃತವಾಗಿ ರಾಜಕೀಯಕ್ಕೆ ಪದಾರ್ಪಣೆ | Nishant

07/03/2026 1:15 PM

​ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ ತೀವ್ರ: ಪರಿಸ್ಥಿತಿ ವಿಕೋಪಕ್ಕೆ ಹೋಗುವ ಎಚ್ಚರಿಕೆ ನೀಡಿದ ಅಮೇರಿಕಾ

07/03/2026 1:08 PM

ALERT : ನಿಮ್ಮ ಮನೆಯ ‘ಸ್ಮಾರ್ಟ್ ಟಿವಿ’ ಯಲ್ಲಿ ಈ ಚಿಹ್ನೆಗಳು ಕಂಡು ಬಂದರೆ `ಹ್ಯಾಕ್’ ಆಗಿದೆ ಎಂದರ್ಥ.!

07/03/2026 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾರ್ವಜನಿಕರೇ ಗಮನಿಸಿ: ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹೀಗಿವೆ!
KARNATAKA

ಸಾರ್ವಜನಿಕರೇ ಗಮನಿಸಿ: ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹೀಗಿವೆ!

By kannadanewsnow0724/04/2024 6:27 AM

ಬೆಂಗಳೂರು:ಭಾರತ ಹವಾಮಾನ ಇಲಾಖೆಯು ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು, ತಾಪಮಾನ (heat wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು 2024 ರ ಏಪ್ರಿಲ್ 01 ರಂದು ಬಿಡುಗಡೆ ಮಾಡಲಾದ ಹವಾಮಾನ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ.

ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಲಹೆಗಳನ್ನು ನೀಡಿದೆ.

ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:

ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12.00 ರಿಂದ 3.00 ರವರೆಗೆ). ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು.

ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು ಉತ್ತಮ.

ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು ಉತ್ತಮ. (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡಬಾರದು).

ಪ್ರಯಾಣ ಮಾಡುವಾಗ, ಜೊತೆಯಲ್ಲಿ ಅಗತ್ಯ ನೀರನ್ನು ಕೊಂಡೊಯ್ಯುವುದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯುವುದನ್ನು ಕಡಿಮೆ ಮಾಡಬೇಕು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂಛೆರ್À ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಒಆರ್‍ಎಸ್ ಅನ್ನು ಬಳಸುವುದು ಉತ್ತಮ. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‍ಗಳು ಅಥವಾ ಸನ್‍ಶೇಡ್‍ಗಳನ್ನು ಬಳಸುವುದು. ಹಾಗೂ ಆಗಿಂದಾಗೆ ತಣ್ಣೀರು ಸ್ನಾನ ಮಾಡುವುದು ಉತ್ತಮ.

ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಪ್ಯಾನ್, ಎಲೆಕ್ಟ್ರೋಲೈಟ್ / ಗ್ಲೋಕೋಸ್ / ಒಆರ್‍ಎಸ್ ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯಲು ನಾಗರಿಕರನ್ನು ಪೆÇ್ರೀತ್ಸಾಹಿಸುವುದು.

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು

ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು / ಅಥವಾ ಶಾಖದ ಅಘಾತದಂತಹ ಆರೋಗ್ಯದ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ಶಾಖ ಸೆಳೆತಗಳು : ಎಡೆರ್ನಾ (ಊತ) ಮತ್ತು ಮೂರ್ಛೆ ಸಾಮಾನ್ಯವಾಗಿ 39 ಡಿಗ್ರಿ ಸೆಂಟಿಗ್ರೇಡ್ ಅಂದರೆ 102 ಡಿಗ್ರಿ ಫ್ಯಾರನ್ ಹೀಟ್‍ಗಿಂತ ಕಡಿಮೆ ಜ್ವರದಿಂದ ಕೂಡಿರುತ್ತದೆ.

ಶಾಖದ ಬಳಲಿಕೆ: ಆಯಾಸ, ದೌರ್ಬಲ್ಯ, ತಲೆ ತಿರುಗುವಿಕೆ, ತಲೆ ನೋವು, ವಾಕರಿಕೆ, ವಾಂತಿ, ಸ್ನಾಯು ಸೆಳೆತ ಮತ್ತು ಬೆವರುವುದು.

ಶಾಖಾಘಾತ: ದೇಹದ ಉಷ್ಣತೆಯು 40 ಡಿಗ್ರಿ ಸೆಂಟಿಗ್ರೇಡ್ ಅಂದರೆ 104 ಡಿಗ್ರಿ ಫ್ಯಾರನ್ ಹೀಟ್ ಅಥವಾ ಅದಕ್ಕಿಂತ ಹೆಚ್ಚಾಗುವುದು ಹಾಗೂ ಉಸಿರಾಟದಲ್ಲಿ ವ್ಯತ್ಯಯ ಮತ್ತು ಪ್ರಜ್ಞೆ ತಪ್ಪುವುದು.

ಅತೀ ಹೆಚ್ಚು ತಾಪಮಾನ ಸಂಬಂಧಿತ ಕಾಯಿಲೆಗೆ ಪ್ರಥಮ ಚಿಕಿತ್ಸೆ:

ಅತೀ ಹೆಚ್ಚು ತಾಪಮಾನದಿಂದ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸುವುದು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸುವುದು / ತಂಪಾದ ಒದ್ದೆ ಬಟ್ಟೆಯನ್ನು ಹಾಕುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು.
ನೀರು ಅಥವಾ ಪುನರ್ಜಲೀಕರಣ ಪಾನೀಯಗಳಾದ ಓಆರ್‍ಎಸ್. ನಿಂಬೆ ಪಾನಕ ನೀಡುವುದು ಉತ್ತಮ. (ವ್ಯಕ್ತಿ ಇನ್ನೂ ಪುಜ್ಞೆ ಹೊಂದಿದ್ದರೆ). ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡುವುದು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಕೂಡಲೇ ಸಂಪರ್ಕಿಸಬೇಕು. ಮದ್ಯ ಪಾನ, ಕಾಫಿ, ಶೇಖರಿಸಿದ ಪಾನೀಯವನ್ನು ನೀಡಬಾರದು.

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿತ ಅನಾರೋಗ್ಯವನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ತೆಗೆದುಕೊಳ್ಳಬೇಕಾದ ನಿರ್ದಿಷ್ಟ ಕ್ರಮಗಳು:

ಅತೀ ಹೆಚ್ಚು ತಾಪಮಾನಕ್ಕೆ ಸಂಬಂಧಿಸಿದಂತೆ ಐಎಂಡಿ ಮತ್ತು ಕೆಎಸ್‍ಎನ್‍ಡಿಎಂಸಿ ಯಿಂದ ನೀಡಿದ ಮುನ್ಸೂಚನೆ / ಎಚ್ಚರಿಕೆಗಳನ್ನು ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು. ಅತೀ ಹೆಚ್ಚು ತಾಪಮಾನದ ಪ್ರತಿಕೂಲ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅತೀ ಹೆಚ್ಚು ತಾಪಮಾನದ (ಸಮಯದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ತಯಾರಿಸಿರುವ ಐಇಸಿ ಕಾರ್ಯಕ್ರವಗಳನ್ನು ಸಕ್ರಿಯಗೊಳಿಸುವುದು.

ನಗರ, ಪಟ್ಟಣ, ಕೊಳಚೆ ಪ್ರದೇಶಗಳು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾಗುವಂತಹ ಹಳ್ಳಿಗಳನ್ನು ಗುರುತಿಸಿ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುಬೇಕು.

ಮಾರುಕಟ್ಟೆಗಳು, ಬಸ ನಿಲ್ದಾಣಗಳು / ಬಸ್ ಟರ್ಮಿನಲ್‍ಗಳು ಮತ್ತು ಜನರು ಸೇರುವ ಇತರ ಆಯಕಟ್ಟಿನ ಸ್ಥಳಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನೆರಳಿನ ಸೌಲಭ್ಯ ಕಲ್ಪಿಸುವುದು.

ಪ್ರಾಣಿಗಳಲ್ಲಿ ಬಿಸಿಗಾಳಿಗೆ ಸಂಬಂಧಿತ ಕಾಯಿಲೆಯ ಚಿಕಿತ್ಸೆಗೆ ನಿಯಮಾನುಸಾರ ಸಂಬಂಧಿಸಿದ ಪಶು ವೈದ್ಯಕೀಯ ಔಷಧಗಳನ್ನು ಶೇಖರಣೆ ಮಾಡುವುದು. ವಾಹನ ಚಾಲಕರಿಗೆ ಅವಶ್ಯ ಕುಡಿಯುವ ನೀರನ್ನು ಒದಗಿಸುವುದು ಹಾಗೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನದ ಪರಿಸ್ಥಿತಿಗಳ ಬಗ್ಗೆ ಪ್ರವಾಸಿಗರಿಗೆ ಸಲಹೆಗಳನ್ನು ಪ್ರಚಾರ ಮಾಡುವುದು.

ಧಾರ್ಮಿಕ ಸ್ಥಳಗಳಲ್ಲಿ ಯಾತ್ರಾರ್ಥಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ತಾತ್ಕಾಲಿಕ ನೆರಳಿನ ಪ್ರದೇಶಗಳನ್ನು ನಿರ್ಮಿಸುವುದು.

ಸಾಮೂಹಿಕ ಸಭೆಯ ಹೊರಾಂಗಣ ಸ್ಥಳಗಳಲ್ಲಿ ಜನರಿಗೆ ತಾತ್ಕಾಲಿಕ ನೆರಳಿನ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು, ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳನ್ನು ಒದಗಿಸಬೇಕು, ಆಸನಗಳ ನಡುವೆ ಸಾಕಷ್ಟು ಸ್ಥಳಾವಕಾಶ ಇರಬೇಕು, ಸಾಕಷ್ಟು ಒಆರ್‍ಎಸ್ ಮತ್ತು ಇತರ ಔಷಧಿಗಳ ದಾಸ್ತಾನು ಮತ್ತು ವೈದ್ಯಕೀಯ ಸಿಬ್ಬಂದಿ ಇರಬೇಕು. ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಗೆ ಪ್ರತ್ಯೇಕ ವಿಶ್ರಾಂತಿ ಸ್ಥಳವನ್ನು ಖಚಿತಪಡಿಸಿಕೊಳ್ಳಬೇಕು. ಅನುಕೂಲಕರ ತಾಪಮಾನವನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ಥಳದಲ್ಲಿ ಸಾಕಷ್ಟು ಗಾಳಿ ಸಂಚಾರ ಇರುವುದನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಸಂಖ್ಯೆಯ ಫ್ಯಾನ್ / ಏರ್‍ಕೂಲರ್‍ಗಳು ಇರಬೇಕು. ಸಾಧ್ಯವಾದಷ್ಟು ಮಟ್ಟಿಗೆ ಸಭೆ / ಸಮಾರಂಭಗಳನ್ನು ತಂಪಾದ ವಾತಾವರಣವಿರುವ ಅವಧಿಯಲ್ಲಿ (ಬೆಳಗ್ಗೆ ಅಥವಾ ಸಂಜೆ) ನಿಗದಿಪಡಿಸುವುದು.

ಜಿಲ್ಲಾಧಿಕಾರಿಗಳು / ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿಗಳು ತಮ್ಮ ಜಿಲ್ಲೆಗೆ ಸಂಬಂಧಿಸಿದ ಅತೀ ಹೆಚ್ಚು ತಾಪಮಾನ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸುವುದು.

ಕುಡಿಯುವ ನೀರಿನ ಲಭ್ಯತೆ:

ಪ್ರಾದೇಶಿಕ ಆಯುಕ್ತರು ಹಾಗು ಜಿಲ್ಲಾಧಿಕಾರಿಗಳು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಜಲಾಶಯಗಳಲ್ಲಿ ಇರುವ ನೀರಿನ ಸಂಗ್ರಹಣೆಯನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಆಧ್ಯತೆಯ ಮೇರೆಗೆ ಕಾಯ್ದಿರಿಸುವುದು.

ಹಿಂದಿನ ವರ್ಷಗಳ ಮಾಹಿತಿಯ ಆಧಾರದ ಮೇಲೆ ಕುಡಿಯುವ ನೀರಿನ ಕೊರತೆ ಉಂಟಾಗುವ ಗ್ರಾಮಗಳನ್ನು ಈಗಾಗಲೆ ಗುರುತಿಸಲಾಗಿದ್ದು ಈ ಗ್ರಾಮಗಳ ವಸ್ತುಸ್ಥಿತಿಯ ಮೇಲೆ ನಿಗಾವಹಿಸುವುದು. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮತ್ತು ಖಾಸಗಿ ಬೋರ್‍ವೆಲ್ ಗುರುತಿಸಿ ಅವುಗಳ ಮೂಲಕ ಕುಡಿಯುವ ನೀರಿನ ಕೊರತೆಯನ್ನು ಅಗತ್ಯತೆಗೆ ಅನುಗುಣವಾಗಿ ನೀಗಿಸಲು ಈಗಾಗಲೇ ಕ್ರಮ ವಹಿಸಲಾಗಿರುತ್ತದೆ. ಪರ್ಯಾಯ ಕಾರ್ಯತಂತ್ರವನ್ನು (ಕಾಂಟಿಂಜೆನ್ಸಿ ಯೋಜನೆ) ಈಗಾಗಲೆ ರೂಪಿಸಲಾಗಿದ್ದು ಆದ್ಯತೆ ಮೇಲೆ ಹಾಗೂ ಅಗತ್ಯತೆಗೆ ತಕ್ಕಂತೆ ಇದನ್ನು ಅನುμÁ್ಠನ ಮಾಡುವುದು.

ಕುಡಿಯುವ ನೀರಿನ ಉದ್ದೇಶಕ್ಕಾಗಿ ಗ್ರಾಮ ಅಥವಾ ಪಟ್ಟಣಕ್ಕೆ ಅಗತ್ಯವಿರುವಷ್ಟು ನೀರನ್ನು ನಿಯಮಾನುಸಾರ ಪೈಪ್‍ಲೈನ್ ಮೂಲಕ ಪೂರೈಸುವುದು. ಅಸ್ತಿತ್ವದಲ್ಲಿರುವ ನೀರು ಸರಬರಾಜು ಯೋಜನೆಗಳ ವಿದ್ಯುತ್ ಪಂಪ್‍ಗಳು, ಕೈ ಪಂಪುಗಳ ದುರಸ್ತಿ, ಕಡಿಮೆ ನೀರಿನ ಲಭ್ಯತೆ ಇರುವ ಬೋರ್‍ವೆಲ್‍ಗಳನ್ನು ಪ್ಲಶಿಂಗ್ ಮಾಡುವುದು ಮತ್ತು ಆಳಗೊಳಿಸುವುದು ಮತ್ತು ಆರ್‍ಒ ಪ್ಲಾಂಟ್‍ಗಳ ನಿರ್ವಹಣೆ ಇತ್ಯಾದಿಗಳನ್ನು ಆದ್ಯತೆಯ ಮೇಲೆ ಈಗಾಗಲೆ ತೆಗೆದುಕೊಳ್ಳಲಾಗಿದ್ದು, ಇದರ ಮೇಲೆ ನಿಗಾವಹಿಸುವುದು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಫೆÇೀರ್ಸ್ ಸಮಿತಿಗಳ ಸಭೆಗಳನ್ನು ಪ್ರತಿವಾರ ನಡೆಸುತ್ತಿದ್ದು, ಇದನ್ನು ಮುಂದುವರೆಸುವುದು.

ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ:

ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗ್ಗೆ ತಪಾಸಣೆ ಕೈಗೊಳ್ಳುವುದು. ಅಗ್ನಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ಕಡ್ಡಾಯವಾಗಿ ನಡೆಸುವುದು.

ಅತೀ ಹೆಚ್ಚು ತಾಪಮಾನ ತಡೆಗಟ್ಟುವ ಕುರಿತಂತೆ ಇಲಾಖಾವಾರು ಕರ್ತವ್ಯ / ಜವಾಬ್ದಾರಿಗಳನ್ನು ಅತೀ ಹೆಚ್ಚು ತಾಪಮಾನದ ಕ್ರಿಯಾ ಯೋಜನೆಗಳಲ್ಲಿ ನಿಗದಿಪಡಿಸಲಾಗಿರುತ್ತದೆ. ಈ ಸೂಚನೆಗಳೊಂದಿಗೆ ಕ್ರಿಯಾ ಯೋಜನೆಗಳಡಿಯಲ್ಲಿ ಜಿಲ್ಲಾಧಿಕಾರಿಗಳು ಕ್ರಮಗಳನ್ನು ಕೈಗೊಳ್ಳುವುದು ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ & ನೋಂದಣಿ ಮತ್ತು ಮುದ್ರಾಂಕ)ಯ ಸರ್ಕಾರದ ಉಪಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Note to the public: Here are the health effects of high temperatures!
Share. Facebook Twitter LinkedIn WhatsApp Email

Related Posts

ALERT : ನಿಮ್ಮ ಮನೆಯ ‘ಸ್ಮಾರ್ಟ್ ಟಿವಿ’ ಯಲ್ಲಿ ಈ ಚಿಹ್ನೆಗಳು ಕಂಡು ಬಂದರೆ `ಹ್ಯಾಕ್’ ಆಗಿದೆ ಎಂದರ್ಥ.!

07/03/2026 1:04 PM2 Mins Read

ALERT : ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮುನ್ನ ಇರಲಿ ಎಚ್ಚರ: ನಿಮ್ಮ ಒಂದು ಸಣ್ಣ ತಪ್ಪು ತಂದೊಡ್ಡಬಹುದು ದೊಡ್ಡ ಗಂಡಾಂತರ!

07/03/2026 12:28 PM2 Mins Read

BREAKING : ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ : ಹುಬ್ಬಳ್ಳಿ ಪಾಲಿಕೆ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ

07/03/2026 12:23 PM1 Min Read
Recent News

ಜೆಡಿಯುಗೆ ನಿತೀಶ್ ಪುತ್ರ ನಿಶಾಂತ್ ಎಂಟ್ರಿ: ನಾಳೆ ಅಧಿಕೃತವಾಗಿ ರಾಜಕೀಯಕ್ಕೆ ಪದಾರ್ಪಣೆ | Nishant

07/03/2026 1:15 PM

​ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿ ತೀವ್ರ: ಪರಿಸ್ಥಿತಿ ವಿಕೋಪಕ್ಕೆ ಹೋಗುವ ಎಚ್ಚರಿಕೆ ನೀಡಿದ ಅಮೇರಿಕಾ

07/03/2026 1:08 PM

ALERT : ನಿಮ್ಮ ಮನೆಯ ‘ಸ್ಮಾರ್ಟ್ ಟಿವಿ’ ಯಲ್ಲಿ ಈ ಚಿಹ್ನೆಗಳು ಕಂಡು ಬಂದರೆ `ಹ್ಯಾಕ್’ ಆಗಿದೆ ಎಂದರ್ಥ.!

07/03/2026 1:04 PM

ಸಮ್ಮತಿಯ ಪ್ರೇಮ ಸಂಬಂಧದಲ್ಲೂ ಹುಡುಗರಿಗೆ ಶಿಕ್ಷೆಯ ಬಿಸಿ:’ಪೋಕ್ಸೊ’ ಕಾಯ್ದೆಯ ದುರುಪಯೋಗಕ್ಕೆ ಮದ್ರಾಸ್ ಹೈಕೋರ್ಟ್ ಕಳವಳ

07/03/2026 12:42 PM
State News
KARNATAKA

ALERT : ನಿಮ್ಮ ಮನೆಯ ‘ಸ್ಮಾರ್ಟ್ ಟಿವಿ’ ಯಲ್ಲಿ ಈ ಚಿಹ್ನೆಗಳು ಕಂಡು ಬಂದರೆ `ಹ್ಯಾಕ್’ ಆಗಿದೆ ಎಂದರ್ಥ.!

By kannadanewsnow5707/03/2026 1:04 PM KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಸ್ಮಾರ್ಟ್ ಟಿವಿ ಪ್ರತಿಯೊಬ್ಬರ ಮನೆಯ ಅವಿಭಾಜ್ಯ ಅಂಗವಾಗಿದೆ. ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳಂತೆಯೇ, ನಿಮ್ಮ ಸ್ಮಾರ್ಟ್…

ALERT : ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮುನ್ನ ಇರಲಿ ಎಚ್ಚರ: ನಿಮ್ಮ ಒಂದು ಸಣ್ಣ ತಪ್ಪು ತಂದೊಡ್ಡಬಹುದು ದೊಡ್ಡ ಗಂಡಾಂತರ!

07/03/2026 12:28 PM

BREAKING : ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ : ಹುಬ್ಬಳ್ಳಿ ಪಾಲಿಕೆ ಮಹಿಳಾ ಅಧಿಕಾರಿ ಲೋಕಾಯುಕ್ತ ಬಲೆಗೆ

07/03/2026 12:23 PM

SHOCKING : ಬೆಂಗಳೂರಲ್ಲಿ ಮೊಬೈಲ್ ಕೊಡದಿದ್ದಕ್ಕೆ ವಿದ್ಯಾರ್ಥಿ ವಿಚಿತ್ರ ವರ್ತನೆ : ಬೆಚ್ಚಿ ಬಿದ್ದ ಪೋಷಕರು!

07/03/2026 12:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.