Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗೆ ನೇರ ಸಂದರ್ಶನ: ಅರ್ಜಿ ಆಹ್ವಾನ
KARNATAKA

ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗೆ ನೇರ ಸಂದರ್ಶನ: ಅರ್ಜಿ ಆಹ್ವಾನ

By ಅವಿನಾಶ್‌ ಆರ್‌ ಭೀಮಸಂದ್ರ

ಬಳ್ಳಾರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ “ಯುವ ಸ್ಪಂದನ” ಕಾರ್ಯಕ್ರಮದಡಿಯಲ್ಲಿ ಹೊಸದಾಗಿ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರ ತರಬೇತಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.

ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ ಪಡೆಯಲಿದ್ದು, ಅಲ್ಲಿ ಆಯ್ಕೆಯಾದ ನಂತರ ಯುವ ಪರಿವರ್ತಕ ಯುವ ಸಮಾಲೋಚಕರೆಂದು ಪ್ರಮಾಣೀಕರಿಸಲಾಗುತ್ತದೆ.
*ಯುವ ಪರಿವರ್ತಕರು:* ಬಳ್ಳಾರಿ, ಕಂಪ್ಲಿ, ಸಿರುಗುಪ್ಪ, ಸಂಡೂರು, ಕುರುಗೋಡು ತಾಲ್ಲೂಕಿನಲ್ಲಿ 06 ಯುವ ಪರಿವರ್ತಕರ ಹುದ್ದೆ ಖಾಲಿಯಿರುತ್ತವೆ.

*ಶೈಕ್ಷಣಿಕ ಅರ್ಹತೆ:* ಪದವಿ ಹಾಗೂ ಮೇಲ್ಪಟ್ಟು (Psychology/Social work) ಪದವಿ ತೇರ್ಗಡೆ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಿ ಅನುಭವ ಇರುವವರಿಗೆ ಆದ್ಯತೆ. ಸಾರ್ವಜನಿಕರ ಮಾನಸಿಕ ಆರೋಗ್ಯ ಸಂವರ್ಧನ ಸೇವೆಗಳ ಬಗ್ಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು ಹೊಂದಿರಬೇಕು. ಕನ್ನಡವನ್ನು ಸ್ವಚ್ಚವಾಗಿ ಮಾತನಾಡಬೇಕು. ಪರಸ್ಪರ ಭಾಂದವ್ಯಾಭಿವೃದ್ಧಿಯ ಕೌಶಲ್ಯ, ತರಬೇತಿ ನೀಡುವ ಕೌಶಲ್ಯ, ಸಂವಹನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ಥೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯಗಳು ಇರಬೇಕು. ವಯೋಮಿತಿ 21 ರಿಂದ 35 ವರ್ಷ ಹೊಂದಿರಬೇಕು. ಗೌರವಧನ ಮತ್ತು ಅವಧಿ ಪ್ರಮಾಣಿಕೃತ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ಹಾಗೂ ಪ್ರವಾಸ ಭತ್ಯೆ ಆರು ತಿಂಗಳ ಕಾಲ ನೀಡಲಾಗುವುದು.
*ಯುವಸಮಾಲೋಚಕ:* ಬಳ್ಳಾರಿ ಜಿಲ್ಲೆಗೆ ಖಾಲಿಯಿರುವ 01 ಹುದ್ದೆಗೆ ಯುವ ಪರಿವರ್ತಕರನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.
*ಶೈಕ್ಷಣಿಕ ಅರ್ಹತೆ:* ಪದವಿ ಹಾಗೂ ಎಂಎಸ್‍ಡಬ್ಲ್ಯೂ (Psychology/Social work) ಪದವಿ ತೇರ್ಗಡೆ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಿ ಅನುಭವ ಇರುವವರಿಗೆ ಆದ್ಯತೆ. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯವನ್ನು ಹೊಂದಿರಬೇಕು. ಸಾರ್ವಜನಿಕರ ಮಾನಸಿಕ ಆರೋಗ್ಯ ಸಂವರ್ಧನ ಸೇವೆಗಳ ಬಗ್ಗೆ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು ಹೊಂದಿರಬೇಕು. ಕನ್ನಡವನ್ನು ಸ್ವಚ್ಚವಾಗಿ ಮಾತನಾಡುವುದು ಅವಶ್ಯಕ. ಪರಸ್ಪರ ಭಾಂದವ್ಯಾಭಿವೃದ್ಧಿಯ ಕೌಶಲ್ಯ, ತರಬೇತಿ ನೀಡುವ ಕೌಶಲ್ಯ, ಸಂವಹನ ಮತ್ತು ಉಲ್ಲೇಖ ಸೇವೆಗಳಿಗೆ ಸಂಘ ಸಂಸ್ಥೆಗಳ ಜೊತೆ ಸಹಯೋಗ ಏರ್ಪಡಿಸುವ ಕೌಶಲ್ಯಗಳು ಇರಬೇಕು. ವಯೋಮಿತಿ 21 ರಿಂದ 35 ವರ್ಷ. ಗೌರವಧನ ಮತ್ತು ಅವಧಿ ಪ್ರಮಾಣೀಕೃತ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ಹಾಗು ಪ್ರವಾಸ ಭತ್ಯೆ ಆರು ತಿಂಗಳ ಕಾಲ ನೀಡಲಾಗುವುದು.

ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿಳಾಸ, ವಯಸ್ಸು, ವಾಸಿಸುತ್ತಿರುವ ವಿಳಾಸ, ವೈಯಕ್ತಿಕ ಮಾಹಿತಿಯೊಂದಿಗೆ ಜ.13 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸ್ಪಂದನ ಕೇಂದ್ರ ಬಿಡಿಎಎ ಫುಟ್‍ಬಾಲ್ ಮೈದಾನ ಮತ್ತು ಜಿಲ್ಲಾ ಕ್ರೀಡಾಂಗಣ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ತಿಳಿಸಿದ್ದಾರೆ.

Who can apply for 'Yuvanidhi'? What documents are required? Don't miss this video ಗಮನಿಸಿ: ‘ಯುವನಿಧಿ’ ಗೆ ಯಾರು ಅರ್ಜಿ ಸಲ್ಲಿಸಬಹುದು? ಏನೆಲ್ಲಾ ದಾಖಲೆಗಳು ಬೇಕು? ಮಿಸ್‌ ಮಾಡದೇ ಈ ವಿಡಿಯೋ ನೋಡಿ
Share. Facebook Twitter LinkedIn WhatsApp Email

Related Posts

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

2 Mins Read

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

1 Min Read

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

2 Mins Read
Recent News

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BREAKING: ಆಫ್ಘಾನ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು | IND vs AFG

​ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ: ಇರಾಕ್ ಮೂಲಕ ಸಾಗಲಿದೆ ಇತಿಹಾಸದ ಅತಿ ದೊಡ್ಡ ಶೋಕಯಾತ್ರೆ!

State News
KARNATAKA

ಬರೋಬ್ಬರಿ 195 ಬಾರಿ ಪ್ರವಾಸ! ರಾಜ್ಯದಲ್ಲೇ ‘ನಂ.1 ಜನಸ್ನೇಹಿ ಸಚಿವ ರಾಮಲಿಂಗಾರೆಡ್ಡಿ’! | Minister Ramalingareddy

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಹಿರಿಯ ಮುಖಂಡರು, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ದಕ್ಷ ಕಾರ್ಯವೈಖರಿ ಮತ್ತು ಜನಸ್ನೇಹಿ…

BREAKING: ಮಂಡ್ಯದಲ್ಲಿ ಕೆಸ್ತೂರು ಪೊಲೀಸರ ಭರ್ಜರಿ ಬೇಟೆ: ಕಾರಿನಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 100 ಕೆಜಿ ಗಾಂಜಾ ವಶ!

BIG NEWS: ರಾಜ್ಯದ ‘KSRP’ಯಲ್ಲಿ ಹೆಚ್ಚಾದ ‘ಕುಡುಕ ಪೊಲೀಸ’ರ ಸಂಖ್ಯೆ; ಮದ್ಯ ವ್ಯಸನ ಮುಕ್ತ ಚಿಕಿತ್ಸೆ, ಕೌನ್ಸೆಲಿಂಗ್‌ಗೆ ಸರ್ಕಾರ ಆದೇಶ!

ಶೀಘ್ರವೇ ರಾಜ್ಯದ ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ KUWJ ಆಗ್ರಹ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.