ಮೈಸೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲವಾಗಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು, ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಇನ್ನಿಲ್ಲ ಎಂದು ಮೈಸೂರಿನ ಸ್ನೇಹಿತರೊಬ್ಬರು ನನಗೆ ಮಾಹಿತಿ ನೀಡಿದರು. ಅವರಿಗೆ ಸುಮಾರು 92 ವರ್ಷ ವಯಸ್ಸಾಗಿತ್ತು. ಕೊನೆಯವರೆಗೂ ಅವರು ತಮ್ಮ ರಿಯಾಜ್ ಗೆ ನಿಷ್ಠರಾಗಿದ್ದರು. ಅವರು ಮಹಾನ್ ಸಂಗೀತಗಾರ ಮಾತ್ರವಲ್ಲ, ಮಹಾನ್ ವಿದ್ವಾಂಸ ಮತ್ತು ಸಾಹಿತ್ಯದ ಶಿಕ್ಷಕರೂ ಆಗಿದ್ದರು. ಇಷ್ಟು ಉದ್ದವನ್ನು ಹೊಂದಲು ನಾನು ಅದೃಷ್ಟಶಾಲಿ ಎಂದಿದ್ದಾರೆ.
A friend in Mysore just informed me that the legendary sarodist Pt. Rajeev Taranath is no more. He was around 92, and till the very was faithful to his riyaz. He was not just a great musician but also a great scholar and teacher of literature. I was lucky to have had this long +
— Sugata Srinivasaraju (@sugataraju) June 11, 2024
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ (93) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕುವೆಂಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
‘ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದು, ಕುವೆಂಪುನಗರದ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಅವರ ಆಪ್ತರೊಬ್ಬರು ಮಾಹಿತಿ ನೀಡಿದ್ದಾರೆ.
10 ದಿನಗಳ ‘ಯೋಗೋತ್ಸವ’ ಕಾರ್ಯಕ್ರಮಕ್ಕೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಚಾಲನೆ
BREAKING: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ‘ಮೋಹನ್ ಚರಣ್ ಮಾಂಝಿ’ ಆಯ್ಕೆ | Mohan Charan Majhi