Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್‌ನ ‘ಖಾರ್ಗ್ ದ್ವೀಪ’ದ ಮೇಲೆ ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಮಿತ್ರರಾಷ್ಟ್ರಗಳಿಗೆ ಒತ್ತಡ

15/03/2026 10:40 AM

Shocking : ಕೇವಲ 2 ಡೋಸ್ ಲಸಿಕೆ ಪಡೆದಿದ್ದ ಬಾಲಕನಿಗೆ ರೇಬಿಸ್ ಉಲ್ಬಣ, ನಾಯಿಯಂತೆ ಬೊಗಳುತ್ತಿರುವ ಯುವಕ!

15/03/2026 10:35 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಖ್ಯಾತ ಯಕ್ಷಗಾನ ಕಲಾವಿದ ‘ಕುಂಬ್ಳೆ ಶ್ರೀಧರ ರಾವ್’ ಹೃದಾಯಘಾತದಿಂದ ನಿಧನ | Kumble Sridhara Rao No More
KARNATAKA

BREAKING: ಖ್ಯಾತ ಯಕ್ಷಗಾನ ಕಲಾವಿದ ‘ಕುಂಬ್ಳೆ ಶ್ರೀಧರ ರಾವ್’ ಹೃದಾಯಘಾತದಿಂದ ನಿಧನ | Kumble Sridhara Rao No More

By kannadanewsnow0905/07/2024 3:56 PM

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

ಕುಂಬ್ಳೆ ಶ್ರೀಧರ ರಾವ್ ಪರಿಚಯ

1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌ರವರು 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಾಗಿದ್ದರು.

ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಇವರು ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಸೇವೆ ಮಾಡಿದ್ದಾರೆ. ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿರುವ ಶ್ರೀಧರ ರಾವ್‌ರವರು ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು.

ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯ ಅನ್ನು ದೇವಿ, ಈಶ್ವರ, ಸೀತಾ ಪರಿತ್ಯಾಗದ ಸೀತೆ, ಲಕ್ಷ್ಮಣ, ಸುದರ್ಶನ ವಿಜಯದ ಲಕ್ಷ್ಮಿ, ವಿಷ್ಣು, ದಮಯಂತಿ ಸ್ವಯಂವರದ ದಮಯಂತಿ, ಭೀಷ್ಮ ವಿಜಯದ ಅಂಬೆ, ದೇವಿ ಮಹಾತ್ಮೆಯ ದೇವಿ ಮೊದಲಾದ ಪಾತ್ರಗಳ ಮೂಲಕ ಪ್ರಸಿದ್ಧಿ ಪಡೆದಿದ್ದ ರಾವ್‌ರವರ ಅಮ್ಮು ಬಳ್ಳಾಲ್ತಿ, ದಾಕ್ಷಾಯಿಣಿ, ಲಕ್ಷ್ಮಿ ಸುಭದ್ರೆಯ ಪಾತ್ರದ ಮೂಲಕವೂ ಅಪಾರ ಅಭಿಮಾನಿಗಳನ್ನು ಪಡೆದಿದ್ದರು.

ಕೊರಗ ಶೆಟ್ರ ಇರಾ ಮೇಳದ ಮೂಲಕ ಯಕ್ಷ ಪಯಣ ಆರಂಭಿಸಿದ್ದ ಶ್ರೀಧರ ರಾವ್‌ರವರು ಯಕ್ಷಗಾನ ದಿಗ್ಗಜ ಶೇಣಿಯವರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನ ಮಾತ್ರವಲ್ಲದೆ ಇನ್ನೂ ಹಲವೆಡೆ ಇವರನ್ನು ಸನ್ಮಾನಿಸಿ ಗೌರವಿಸಲಾಗಿತ್ತು.

ಇತ್ತೀಚೆಗಷ್ಟೇ ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಟ್ರಸ್ಟ್ ಜಸ್ಟೀಸ್ ಕೆ.ಜಗನ್ನಾಥ ಶೆಟ್ಟಿ ಸ್ಮಾರಕ ಪ್ರಯುಕ್ತ ಕೊಡ ಮಾಡುವ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಕುಂಬ್ಳೆ ಶ್ರೀಧರ ರಾವ್ ಅವರು ವಿವಿಧ ಯಕ್ಷಗಾನ ಮೇಳಗಳಲ್ಲಿ ವ್ಯವಸಾಯ ಮಾಡಿ, ಶ್ರೀ ಧರ್ಮಸ್ಥಳ ಮೇಳದಿಂದ ನಿವೃತ್ತಿಯಾದವರು.

ದಾಕ್ಷಾಯಿಣಿ, ಸುಭದ್ರೆ, ದ್ರೌಪದಿ, ಅಮ್ಮುದೇವಿ ಮೊದಲಾದ ಸ್ತ್ರೀ ಪಾತ್ರಗಳಿಂದ ಖ್ಯಾತರಾಗಿದ್ದವರು. ಮೇಳ ತಿರುಗಾಟದ ಒಂದು ಕಾಲಘಟ್ಟದಲ್ಲಿ ಸ್ತ್ರೀ ಪಾತ್ರದಿಂದ ಪುರುಷ ಪಾತ್ರಕ್ಕೆ ಬದಲಾದವರು. ಕೀರ್ತಿಶೇಷರಾದ ಡಾ.ಶೇಣಿ ಗೋಪಾಲಕೃಷ್ಣ ಭಟ್, ರಾಮದಾಸ ಸಾಮಗ, ಶಂಕರ ನಾರಾಯಣ ಸಾಮಗ ಸಹಿತ ಹಲವು ಹಿರಿಯರ ಒಡನಾಟದಲ್ಲಿದ್ದವರು.

ಶ್ರೀ ಧರ್ಮಸ್ಥಳ ಮೇಳದ ಪ್ರದರ್ಶನಗಳಲ್ಲಿ ಸ್ತ್ರೀ ಪಾತ್ರಕ್ಕೆ ಪ್ರತ್ಯೇಕವಾದ ಸ್ವಂತಿಕೆಯ ಛಾಪನ್ನು ಒತ್ತಿದ್ದ ಇವರು ತಾಳಮದ್ದಳೆ ಅರ್ಥದಾರಿಯೂ ಆಗಿದ್ದಾರೆ. ಇತ್ತೀಚೆಗಷ್ಟೇ ದಶಮಾನೋತ್ಸವದ ಸಂಭ್ರಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಕೊಡ ಮಾಡುವ ದಶಮಾನೋತ್ಸವ ಪ್ರಶಸ್ತಿಗೆ ಕುಂಬ್ಳೆ ಶ್ರೀಧರ ರಾವ್ ಆಯ್ಕೆಯಾಗಿದ್ದರು.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

BREAKING: ಸಲಿಂಗ ವಿವಾಹ: ಜು.10ರಂದು ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ | Same-Sex Marriage

ಬೆಂಗಳೂರಿಗರೇ ಹುಷಾರ್ : ಇನ್ನುಮುಂದೆ ಎಲ್ಲೆಂದರಲ್ಲಿ ಕಸ ಬೀಸಾಡಿದರೆ ಬೀಳುತ್ತೆ ಭಾರಿ ದಂಡ!

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM2 Mins Read

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

15/03/2026 10:16 AM2 Mins Read

BREAKING : ಗ್ರಾಹಕರಿಗೆ ಸಿಹಿ ಸುದ್ದಿ: ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸಂಪೂರ್ಣ ಇತ್ಯರ್ಥ : ಕೆ.ಎಚ್. ಮುನಿಯಪ್ಪ

15/03/2026 9:58 AM1 Min Read
Recent News

ಇರಾನ್‌ನ ‘ಖಾರ್ಗ್ ದ್ವೀಪ’ದ ಮೇಲೆ ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಮಿತ್ರರಾಷ್ಟ್ರಗಳಿಗೆ ಒತ್ತಡ

15/03/2026 10:40 AM

Shocking : ಕೇವಲ 2 ಡೋಸ್ ಲಸಿಕೆ ಪಡೆದಿದ್ದ ಬಾಲಕನಿಗೆ ರೇಬಿಸ್ ಉಲ್ಬಣ, ನಾಯಿಯಂತೆ ಬೊಗಳುತ್ತಿರುವ ಯುವಕ!

15/03/2026 10:35 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM

BREAKING : ದುಬೈನಲ್ಲಿ ಇರಾನ್ ದಾಳಿಯ ವಿಡಿಯೋ ಮಾಡಿ ವೈರಲ್ : ಭಾರತೀಯರು ಸೇರಿ 25 ಮಂದಿ ಅರೆಸ್ಟ್ !

15/03/2026 10:21 AM
State News
KARNATAKA

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

By kannadanewsnow0515/03/2026 10:26 AM KARNATAKA 2 Mins Read

ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಾದ್ಯಂತ ಮಹಿಳೆಯರು ಮತ್ತು ಯುವತಿಯರು ನಾಪತ್ತೆಯಾಗುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿವೆ.…

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

15/03/2026 10:16 AM

BREAKING : ಗ್ರಾಹಕರಿಗೆ ಸಿಹಿ ಸುದ್ದಿ: ಒಂದು ವಾರದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸಂಪೂರ್ಣ ಇತ್ಯರ್ಥ : ಕೆ.ಎಚ್. ಮುನಿಯಪ್ಪ

15/03/2026 9:58 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

15/03/2026 9:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.