ಬಳ್ಳಾರಿ: ಜಿಲ್ಲೆ ವ್ಯಾಪ್ತಿಯಲ್ಲಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 20215 ರ ಸೆಕ್ಷನ್ 41 ರಲ್ಲಿ ನೋಂದಾಣಿಯಾಗದೇ ಇರುವ ಮಕ್ಕಳ ಪಾಲನಾ ಸಂಸ್ಥೆಗಳನ್ನು ನೋಂದಾಯಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ನೋಂದಾಯಿಸಿಕೊಳ್ಳಲು ನಗರದ ಕಂಟೋನ್‍ಮೆಂಟ್‍ನ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿ ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಅವರ ಮೊ.9945254537 ಹಾಗೂ ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್ ಅವರ ಮೊ.7090376455 ಗೆ ಸಂಪರ್ಕಿಸಬಹುದು. ಒಂದು ವೇಳೆ ನೋಂದಾಯಿಸಿಕೊಳ್ಳದ ಅನಧೀಕೃತ ಮಕ್ಕಳ ಪಾಲನಾ ಸಂಸ್ಥೆಗಳ ವಿರುದ್ಧ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 20215 ರ ಸೆಕ್ಷನ್ 42 ರನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.