ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್ ಮಾಡದಂತೆ ವಾರ್ನ್ ಮಾಡಿದ್ದೇವೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ವಾರ್ನಿಂಗ್ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಮಂತ್ರಿ ಮಾಡಿಲ್ಲ. ಅದಕ್ಕಾಗಿ ಹೀಗೆ ಮಾತನಾಡಿದ್ದಾರೆ. ಯಾರೇ ಆದ್ರು ಪಕ್ಷದ ಚೌಕಟ್ಟಿನಲ್ಲಿ ಮಾಡಬೇಕು. ಪಕ್ಷದ ಹಿರಿಯ ನಾಯಕರನ್ನು ಗೌರವಿಸಬೇಕು. ಯತ್ನಾಳ್ ಇಂತಹ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ್ದೇವೆ. ಪಕ್ಷಕ್ಕೆ ಡ್ಯಾಮೇಜ್ ಮಾಡದಂತೆ ವಾರ್ನ್ ಮಾಡಿದ್ದೇವೆ. ಪಕ್ಷದ ಹಿರಿಯ ನಾಯಕರ ವಿರುದ್ಧ ಮಾತನಾಡದಂತೆ ಸೂಚಿಸಿದ್ದೇವೆ. ಈ ಬಗ್ಗೆ ಪಕ್ಷ ಸೂಕ್ತವಾದ ನಿರ್ಧಾರ ಮಾಡಲಿದೆ. ಯಾರು ತಮ್ಮ ಸ್ವಾರ್ಥವನ್ನು ಇಟ್ಟುಕೊಂಡು ಮಾತನಾಡಬಾರದು ಎಂದರು.