ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೋಮು ದಳ್ಳುರಿ ಹೆಚ್ಚಾಗುತ್ತಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಇಬ್ಬರು ಮುಸ್ಲಿಂ ಮುಖಂಡರಿಗೆ ಶಿಸ್ತು ಉಲ್ಲಂಘನೆಯ ನೋಟಿಸ್ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಅಶ್ರಫ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಶೆಟ್ಟಿಯಿಂದ ನೋಟಿಸ್ ಜಾರಿಗೊಳಿಸಲಾಗಿದ್ದು, ತಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬುದಾಗಿ ಎಚ್ಚರಿಸಲಾಗಿದೆ.
ಇನ್ನೂ ಶಿಸ್ತು ಉಲ್ಲಂಘನೆಯ ನೋಟಿಸ್ ತಲುಪಿದ 7 ದಿನಗಳೊಳಗೆ ವಿವರಣೆ ನೀಡುವಂತೆ ಸೂಚಿಸಲಾಗಿದೆ.
ಅಂದಹಾಗೇ ಶಾಹುಲ್ ಹಮೀದ್ ಅಲ್ಪಸಂಖ್ಯಾತರ ಸಭೆಯನ್ನು ಆಯೋಜಿಸಿದ್ದರು. ಈ ಸಭೆ ನಡೆಸಿ ಅಲ್ಪಸಂಖ್ಯಾತರಿಂದ ರಾಜೀನಾಮೆ ಕೊಡಿಸುವುದಾಗಿ ವರದಿ ಬಂದಿತ್ತು. ಪಕ್ಷಕ್ಕೆ ರಾಜೀನಾಮೆ ಕೊಡಿಸೋದಾಗಿ ಸುದ್ದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಿಸ್ತು ಉಲ್ಲಂಘನೆ ನೋಟಿಸ್ ನೀಡಲಾಗಿದೆ.
BIG NEWS: ನಾನು ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ನಟ ಶಿವಣ್ಣ
BREAKING: ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ರಾಜ್ಯ ಸಚಿವ ಸ್ಥಾನಮಾನ ವಾಪಸ್