ಸುಭಾಷಿತ :

Monday, February 24 , 2020 2:05 AM

ಪಡಿತರ ಕಾರ್ಡ್ ದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ


Monday, January 20th, 2020 6:32 am

ಬೆಂಗಳೂರು : ಆಹಾರ ಇಲಾಖೆಯು ಪಡಿತರ ಚೀಟಿದಾರರಿಗೆ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಸರ್ವರ್ ಸಮಸ್ಯೆಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ಪಡಿತರ ಚೀಟಿದಾರರ ಇ-ಕೆವೈಸಿ ಅಪ್ ಡೇಟ್ ಮಾಡುವುದನ್ನು ಜನವರಿ 20 ರಿಂದ (ಇಂದಿನಿಂದ ) ಪ್ರಾರಂಭಿಸಲಾಗುವುದು ಎಂದು ರಾಜ್ಯ ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಾದ್ಯಂತ ಇ-ಕೆವೈಸಿ ಮತ್ತು ಪಡಿತರ ವಿತರಣೆಗೆ ಒಂದೇ ಸರ್ವರ್ ಇರುವುದರಿಂದ ಇ-ಕೆವೈಸಿ ದೃಢೀಕರಿಸಲು ತಾಂತ್ರಿಕ ಕಾರಣಗಳು ಎದುರಾಗುತ್ತಿದ್ದು, ಇ-ಕೆವೈಸಿ ದೃಢೀಕರಿಸಲು ಪ್ರತ್ಯೇಕ ಸರ್ವರ್‍ನ್ನು ಅಳವಡಿಸಲು ತೀರ್ಮಾನಿಸಿದ್ದು, ದಿನಾಂಕ 20-01-2020 ರವರೆಗೆ ಪಡಿತರ ಚೀಟಿದಾರರ ಇ-ಕೆವೈಸಿ ಕಾರ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಇಂದಿನಿಂದ ಇ-ಕೆವೈಸಿ ಆರಂಭಿಸಲಾಗುವುದು. ಮಾರ್ಚ್-2020ರ ಅಂತ್ಯದವರೆಗೆ ಇ-ಕೆವೈಸಿ ಅಪ್ ಡೇಟ್ ಮಾಡುವುದನ್ನು ವಿಸ್ತರಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions