ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವ ವಿಚಾರವಾಗಿ ಇದು ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ತಪ್ಪು ಎಂದು ಬೆಂಗಳೂರಿನಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಹೇಳಿಕೆ ನೀಡಿದರು.
ರಾಜ್ಯದಲ್ಲಿ ಯಾರಿಗೆ ತೆರಿಗೆ ಹಾಕಬೇಕೆಂಬ ಹುಡುಕಾಟ ನಡೆದಿದೆ. ಬೀದಿ ಬದಿ ವ್ಯಾಪಾರಿಗಳಿಗೆ ನೋಟಿಸ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರವೇ ತಪ್ಪು ಮಾಡಿದೆ ಎಂದು ಸಿಎಂ ಹೇಳುತ್ತಿದ್ದಾರೆ ಅದು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಗಳ ಅಧಿಕಾರಿಗಳಿಂದ ಆದ ತಪ್ಪು ಎಂದರು.
ಅದಕ್ಕಾಗಿ ಅಧಿಕಾರಿಗಳು ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ನೀವು ಪತ್ರ ಬರೆಯುವ ಅವಶ್ಯಕತೆ ಇಲ್ಲ. ವ್ಯಾಪಾರಿಗಳು ಮಾಡುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತೇವೆ. ರಾಜ್ಯ ಸರ್ಕಾರದಿಂದ ಆಗಿರುವ ತಪ್ಪುಗಳನ್ನು ಎಚ್ಚರಿಸುತ್ತೇವೆ. ಕೂಡಲೇ ಸಿಎಂ ಸಿದ್ದರಾಮಯ್ಯ ಸಣ್ಣ ವ್ಯಾಪಾರಿಗಳನ್ನು ಕರೆದು ಮಾತನಾಡಬೇಕು ಎಂದು ರವಿಕುಮಾರ್ ಹೇಳಿಕೆ ನೀಡಿದರು.