18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ.
ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಅವೈಜ್ಞಾನಿಕವಾಗಿರುವ ರಸ್ತೆಗಳನ್ನು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರಲ್ಲದೆ, ಹೆಚ್ಚು ಸಾವು ಸಂಭವಿಸುತ್ತಿರುವುದು ಅಪಘಾತಗಳಿಂದ ಇದರ ಬಗ್ಗೆ ಯಾರಿಗೂ ಅರಿವಿಲ್ಲ, ಉದಾಸೀನದಿಂದ ವಾಹನ ಚಲಾಯಿಸಿ ಅವಘÀಡÀಗಳು ಸಂಭವಿಸುವುದರಿAದ ಅಮಾಯಕ ಕುಟುಂಬಗಳು ನೋವು ಅನುಭವಿಸುತ್ತಾರೆ ಎಂದರು.
ರಸ್ತೆ ಒತ್ತುವರಿ ತೆರವುಗೊಳಿಸುವುದು, ಮುಖ್ಯ ರಸ್ತೆಗಳಲ್ಲಿ ಪಾದಾಚಾರಿಗಳ ಸಂಚಾರಕ್ಕೆ ಮೀಸಲಿರುವ ಸ್ಥಳದಲ್ಲಿ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ನೀಡದಂತೆ ತೆರವುಗೊಳಿಸುವ ನಿಟ್ಟಿನಲ್ಲಿ ಡಂಗೂರ ಸಾರಿಸಿ, ನೋಟೀಸ್ ನೀಡಿ, ಪತ್ರಿಕಾ ಪ್ರಕಟಣೆ ನೀಡಿ ನಂತರ ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ರಸ್ತೆ ಸುರಕ್ಷತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ತಿಳಿಸಿದರು. ದ್ವಿಚಕ್ರ ವಾಹನ ಚಾಲಾಯಿಸುವವರು ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಯುವ ಜನತೆ ಬಹಳ ಲಘುವಾಗಿ ಪರಿಗಣಿಸಬಾರದು ಇದರಿಂದ ಆಗುವ ಅವಘಡಗಳನ್ನು ತಡೆಯಲು ಅಧಿಕಾರಿಗಳು ಕ್ರಮವಹಿಸಬೇಕು ಎಂದರಲ್ಲದೆ, 18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ತಿಳಿಸಿದರು.
ಪದವಿ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಹೆಲ್ಮೆಟ್ ಕಡ್ಡಾಯ ಹಾಕಿಕೊಂಡು ಬರದಿದ್ದಲ್ಲಿ ಕಾಲೇಜು ಆವರಣಕ್ಕೆ ಪ್ರವೇಶಕ್ಕೆ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರು ನಿಗಾವಹಿಸಿ ಕ್ರಮವಹಿಸುವಂತೆ ಸೂಚಿಸಿದರು.
ಶಾಲಾ ಕಾಲೇಜುಗಳಲ್ಲಿ ಮಾಹಿತಿಗಾಗಿ ರಸ್ತೆ ಸುರಕ್ಷತಾ ಚಿಹ್ನೆಗಳ ಫಲಕ ಅಳವಡಿಸಲು ಸೂಚಿಸಿದರಲ್ಲದೆ, ಸಂಚಾರ ನಿಯಮಗಳ ಕುರಿತು ಶಾಲಾ ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳಿಗೆ ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.
ಘಟನೆ ಸಂಭವಿಸಿದ ನಂತರ ಕ್ರಮವಹಿಸುವುದಲ್ಲ, ಮುನ್ನೆಚ್ಚರಿಕೆವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಈ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದಲ್ಲಿ ಕೂಡಲೇ ಸಭೆ ನಡೆಸಿ ಸಂಚಾರಿ ನಿಯಮಗಳ ಪಾಲನೆ ಮತ್ತು ರಸ್ತೆ ಅಪಘಾತಗಳ ತಡೆಗಟ್ಟುವ ನಿಟ್ಟಿನಲ್ಲಿ ತಹಸೀಲ್ದಾರ್‌ಗಳು ಕ್ರಮಕೈಗೊಳ್ಳಲು ಸೂಚಿಸಿದರು.
ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ಹಾಗು ರಾಷ್ರೀಯ ಹೆದ್ದಾರಿಗಳ ಬಗ್ಗೆ ಸ್ಥಳೀಯವಾಗಿ ಪರಿಶೀಲಿಸಿ, ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ರಚನೆಮಾಡುವಂತೆ ಸೂಚಿಸಿದರು.
ನಿರ್ಲಕ್ಷö್ಯತೆಯಿಂದ ವಾಹನ ಚಲಾಯಿಸಿ ಅಮಾಯಕ ಮತ್ತು ಮುಗ್ಧ ಅಮೂಲ್ಯವಾದ ಜೀವಗಳನ್ನು ಬಲಿಪಡೆಯುವುದನ್ನು ತಪ್ಪಿಸಲು ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ವಾಹನ ಚಾಲನ ಪರವಾನಾಗಿ ನೀಡುವ ಸಂದರ್ಭದಲ್ಲಿ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸುವುದರ ಜೊತೆಗೆ ಅರ್ಹರಿದ್ದಾರ ಎಂಬುದನ್ನು ಪರಿಶೀಲಿಸಿ ಪರವಾನಗಿ ನೀಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಟ್ರಾಕ್ಟರ್‌ಗಳಿಗೆ ರೇಡಿಯನ್ ಟ್ರಿಪ್ ಅಳವಡಿಸಲು ಕ್ರಮವಹಿಸುವುದರ ಜೊತೆಗೆ ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಿ ಎಂದರಲ್ಲದೆ, ರಸ್ತೆ ಸುರಕ್ಷತೆ ಎಂದರೆ ರಸ್ತೆಗಳ ಗುಂಡಿ ಮುಚ್ಚುವುದು ಮಾತ್ರವಲ್ಲ, ವಾಹನ ಚಾಲನೆ ಒಂದು ಕೌಶಲ್ಯ ಇದರ ಬಗ್ಗೆ ಗಮನಹರಿಸಬೇಕು. ಬಹಳ ಲಘುವಾಗಿ ಪರಿಗಣಿಸುತ್ತಿದ್ದಾರೆ. ಇದನ್ನು ಗಂಭೀರವಾಗಿ ಚಿಂತನೆ ಮಾಡಬೇಕು ಎಂದರು.
ಟೋಲ್ ಪ್ಲಾಜ್ಹಾಗಳಲ್ಲಿ ಬ್ರೆತ್ ಅನಲೈಜರ್ ಮಿಶನ್ ಇಡಬೇಕು. ರಾಷ್ಟಿçÃಯ ಹೆದ್ದಾರಿ-75 ರಲ್ಲಿ ಕಡ್ಡಾಯವಾಗಿ ತುರ್ತು ಸಂದರ್ಭದಲ್ಲಿ ಬಳಕೆಗೆ 2 ಅಂಬುಲೆನ್ಸ್ ಲಭ್ಯವಿರುವಂತೆ ನೋಡಿಕೊಳ್ಳಿ ಎಂದರಲ್ಲದೆ, ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವಂತೆಯೂ ಸಹ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಟ್ರಾಕ್ ಟರ್ಮಿನಲ್ ನಿರ್ಮಾಣಕ್ಕೆ ನಗರದ ಹೊರವಲಯದಲ್ಲಿ ಜಾಗವನ್ನು ಗುರುತಿಸುವಂತೆ ಸೂಚಿಸಿದರಲ್ಲದೆ, ಶಾಲಾ ವಾಹನ ಚಾಲಕರು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ವಾಹನ ಪರವಾನಗಿ ಹೊಂದಿರಬೇಕು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಮಾತನಾಡಿ ರಾತ್ರಿ 9.30 ರ ನಂತರ ಬೀದಿ ದೀಪಗಳು ಇಲ್ಲದಿರುವುದು, ಅವೈಜ್ಞಾನಿಕವಾಗಿ ರಸ್ತೆಗಳಿಗೆ ಹಮ್ಸ್, ರಮ್ರ್ಸ್ರ ಅಳವಡಿಸುವುದು ಅಪಘಾತ ಸಂಭವಿಸಲು ಕಾರಣವಾಗುತ್ತಿದೆ ಈ ನಿಟ್ಟಿನಲ್ಲಿ ರಸ್ತೆ ಅಪಘಾತ ಸಂಭವಿಸಿದ ವ್ಯಾಪ್ತಿಯ ಸಂಬAಧಪಟ್ಟ ಅಧಿಕಾರಿಯ ಮೇಲೆ ಎಫ್‌ಐಆರ್ ಮಾಡಲಾಗುತ್ತದೆ. ಎಂದ ಅವರು ಅಪಘಾತ ಮಾಡಿದ ವಾಹನ ಚಾಲಕನ ಪರವಾನಗಿಯನ್ನು ರದ್ದುಪಡಿಸಲು ಕ್ರಮವಹಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ನಗರ ಪ್ರದೇಶದಲ್ಲಿ ವಾಣಿಜ್ಯ ಮಳಿಗೆಗಳ ಸೆಲ್ಲಾರ್‌ಗಳನ್ನು ದಾಸ್ತಾನು ಮಾಡಲು ಉಪಯೋಗಿಸಿಕೊಳ್ಳುತ್ತಿದ್ದು, ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಆದ್ದರಿಂದ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಪರವಾನಗಿ ನೀಡುವ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಅಗತ್ಯ ಸ್ಥಳಾವಕಾಶ ಇದೆಯೇ ಎಂಬುದನ್ನು ಪರಿಶಿಲಿಸಿ ನಂತರ ಪರವಾನಗಿ ನೀಡಲು ಕ್ರಮವಹಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಲೋಕೋಪಯೋಗಿ ಇಲಾಖೆ ಕಾರ್ಯ ಪಾಲಕ ಅಭಿಯಂತರರಾದ ಗಿರೀಶ್, ಹಿಮ್ಸ್ ನಿರ್ದೇಶಕ ರಾದ ಡಾ.ರಾಜಣ್ಣ, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್, ಮಹಾನಗರಪಾಲಿಕೆ ಆಯುಕ್ತರಾದ ಕೃಷ್ಣ ಮೂರ್ತಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಲರಾಂ, ವಿವಿಧ ಇಲಾಖೆಗಳ ಅಧಿಕಾರಿಗಳು ಆಟೋ ಚಾಲಕರ, ಟಿಪ್ಪರ್ , ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.