ಬೆಂಗಳೂರು : ತಸ್ತೀಕ್ ಹಣ ವಾಪಸ್ ನೀಡುವಂತೆ ಕಣ್ಣನ್ ಅವರಿಗೆ ನೋಟಿಸ್ ನೀಡಿರುವುದಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು ನೋಟಿಸ್ ನೀಡಿದ್ದು ತಪ್ಪು ಅಂತ ಹೇಳಿದ್ದಾರೆ.
ಈ ಬಗ್ಗೆ ಅವರು ಟ್ವಿಟ್‌ನಲ್ಲಿ ಮಾಹಿತಿ ನೀಡಟಿದ್ದು, ಹಿರೇಮಗಳೂರು ಕಣ್ಣನ್ ಅವರಿಗೆ ವೇತನದಲ್ಲಿ ಭಾಗಶಃ ಹಿಂತಿರುಗಿಸುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಅಂಥ ಹೇಳಿದ್ದಾರೆ.
ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ.
-…— CM of Karnataka (@CMofKarnataka) January 24, 2024