ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ಕ್ರಮವಹಿಸಲಾಗಿದೆ. ಶೀಘ್ರವೇ 10,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ ನಂತ್ರ, ಪ್ರಕ್ರಿಯೆ ಶುರು ಮಾಡಲಾಗುತ್ತದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ತಳವಾರ್ ಸಾಬಣ್ಣ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇದೆ. ಇದೇ ಕಾರಣಕ್ಕಾಗಿ ಫಲಿತಾಂಶ ಕೂಡ ಕುಂಠಿತಗೊಂಡಿದೆ. 19,000 ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿದೆ. ಇದಲ್ಲದೇ ಕೊಠಡಿಗಳ ಸಮಸ್ಯೆ ಕೂಡ ಇದೆ. ಇದನ್ನು ಕೂಡಲೇ ಸರಿ ಮಾಡಬೇಕು. ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿದರು.
ಈ ಪ್ರಶ್ನೆಗೆ ಉತ್ತರಿಸಿದಂತ ಸಚಿವ ಮಧು ಬಂಗಾರಪ್ಪ ಅವರು, ಶಿಕ್ಷಣ ಇಲಾಖೆಯಲ್ಲಿ 50,000 ಶಿಕ್ಷಕರ ಕೊರತೆ ಇದೆ. ಈ ಹಿನ್ನಲೆಯಲ್ಲೇ 10,000 ಶಿಕ್ಷಕರ ನೇಮಕಕ್ಕೆ ಅನುಮತಿಸುವಂತೆ ಆರ್ಥಿಕ ಇಲಾಖಎಗೆ ಪತ್ರವನ್ನು ಬರೆಯಲಾಗಿದೆ. ಆರ್ಥಿಕ ಇಲಾಖೆಯಿಂದ ಅನುಮತಿಸಿದ ನಂತ್ರ, ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದರು.
ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’: ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ