ಬೆಂಗಳೂರು: ನಗರದ ಬ್ಯಾಡರಹಳ್ಳಿ ಠಾಣೆಯ ಪೊಲೀಸರಿಂದ ಬೈಕ್ ನಲ್ಲಿ ಮಾರಕಾಸ್ತ್ರಗಳನ್ನು ಇರಿಸಿಕೊಂಡು ತಿರುಗಾಡುತ್ತಿದ್ದಂತ ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳೆದ ಎರಡು ಮೂರು ತಿಂಗಳಿನಿಂದ ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ವಾಸವಾಗಿದ್ದನು. ನಿನ್ನೆ ಸಹಚರರೊಂದಿಗೆ ಬೈಕ್ ನಲ್ಲಿ ಮಾರಕಾಸ್ತ್ರಗಳನ್ನು ಇರಿಸಿಕೊಂಡು ತೆರಳುತ್ತಿದ್ದಾಗ ಪೊಲೀಸರು ಗಮನಿಸಿದ್ದರು.
ಕೂಡಲೇ ಅಲರ್ಟ್ ಆದಂತ ಪೊಲೀಸರು ರೌಡಿ ಶೀಟರ್ ಕುಣಿಗಲ್ ಗಿರಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಲ್ಲಿ ‘ಅಪರಾಧ ಕೃತ್ಯ’ ತಡೆಗೆ ಮಹತ್ವದ ಕ್ರಮ: 7,000 ಸಿಸಿಟಿವಿ 1640 ಸ್ಥಳಗಳಲ್ಲಿ ಅಳವಡಿಕೆ
GOOD NEWS : ಇನ್ಮುಂದೆ ಹರಟೆ ಹೊಡೆಯಲು ಶಾಸಕರಿಗೂ ‘ಕ್ಲಬ್’ ವ್ಯವಸ್ಥೆ : ಸ್ಪೀಕರ್ ಯುಟಿ ಖಾದರ್ ಹೇಳಿಕೆ