ಶಿವಮೊಗ್ಗ : ಜಿಲ್ಲೆಯ ಸಾಗರ ನಗರದ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ನವೆಂಬರ್ನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಅತ್ಯಂತ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದಂತ ಅವರು, ಕಾಲೇಜಿನ ಸರ್ವಾಂಗೀಣ ಅಭಿವೃದ್ದಿಗೆ ಅಗತ್ಯ ಗಮನ ಹರಿಸಲಾಗಿದೆ. ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕಾಲೇಜಿಗೆ ಸುಣ್ಣಬಣ್ಣ, ಶೌಚಾಲಯ, ಟೈಲ್ಸ್ ಅಳವಡಿಕೆ, ಮುಂಭಾಗದಲ್ಲಿ ದೊಡ್ಡ ನಾಮಫಲಕ, ಕೊಠಡಿಗಳ ದುರಸ್ತಿ, ಸಭಾಭವನ ನಿರ್ಮಾಣ ಹೀಗೆ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ಮಳೆಗಾಲ ಇರುವುದರಿಂದ ಸದ್ಯ ಸುವರ್ಣ ಮಹೋತ್ಸವ ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದ ನಂತರ ನವೆಂಬರ್ ತಿಂಗಳಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ ಎಂದರು.
ಈ ಕಾಲೇಜಿನಲ್ಲಿ ನಾನು ಓದಿದ್ದೇನೆ. ಇದೊಂದು ಸ್ಮರಣೀಯ ಕಾರ್ಯಕ್ರಮವಾಗಬೇಕು. ಈ ಕಾಲೇಜಿನಲ್ಲಿ ಓದಿರುವ ಎಲ್ಲರನ್ನೂ ಒಂದೆಡೆ ಸೇರಿಸಿ ಅಗತ್ಯ ಸಲಹೆ ಸಹಕಾರಗಳನ್ನು ಪಡೆಯಲಾಗುತ್ತದೆ. ಕಾಲೇಜಿನ ಹಳೇಯ ವಿದ್ಯಾರ್ಥಿ ಜೊತೆಗೆ ವಿವಿಧ ಸಂಘ ಸಂಸ್ಥೆಗಳನ್ನು ಗಮನಕ್ಕೆ ತೆಗೆದುಕೊಳ್ಳಲಾಗುತ್ತದೆ. ಕಾಲೇಜಿನ ಸುವರ್ಣ ಮಹೋತ್ಸವಕ್ಕೆ ಈಗಿನಿಂದಲೇ ಅಗತ್ಯ ಸಿದ್ದತೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು, ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ., ಕಲಸೆ ಚಂದ್ರಪ್ಪ, ಬಸವರಾಜ್, ಭವ್ಯ, ಉಮೇಶ್ ಸೂರನಗದ್ದೆ ಇನ್ನಿತರರು ಹಾಜರಿದ್ದರು.
ಸಾಗರದ ಆಸ್ಪತ್ರೆಯಲ್ಲಿ ‘ಜನರೇಟರ್ ಕಳ್ಳತನ’: ತಪ್ಪಿತಸ್ಥರನ್ನು ಬಚಾವ್ ಪ್ರಯತ್ನ ಮಾಡಬೇಡಿ- MLA ವಾರ್ನಿಂಗ್
GOOD NEWS: ಬಿಬಿಎಂಪಿ ವ್ಯಾಪ್ತಿಯಲ್ಲಿ ಆನ್ ಲೈನ್, ಫೇಸ್ ಲೆಸ್ ‘ಇ-ಖಾತಾ ವ್ಯವಸ್ಥೆ’ ಜಾರಿ