ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ NSUI ವಿದ್ಯಾರ್ಥಿ ಸಂಘಟನೆಯಿಂದ ರಾಜ್ಯ ಮಟ್ಟದಲ್ಲಿ ಎಲ್ಲ ವಿಶ್ವವಿದ್ಯಾಲಯಗಳ ಬಂದ್ಗೆ ಕರೆ ಕೊಟ್ಟಿದೆ.
BIGG NEWS: ಬೆಳಗಾವಿಯಲ್ಲಿ ಡಿ. 19ರಿಂದ ಚಳಿಗಾಲ ಅಧಿವೇಶನ; ಸುವರ್ಣ ಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಎಲ್ಲ ರಾಜ್ಯಗಳಿಗಿಂತ ಮೊದಲು ಕರ್ನಾಟಕದಲ್ಲಿಯೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೊಳಿಸಲಾಗಿದೆ. ನ್ಯಾಷನಲ್ ಎಜುಕೇಷನ್ ಪಾಲಿಸಿ. ಇದರೊಂದಿಗೆ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ಐತಿಹಾಸಿಕ ಹೆಜ್ಜೆ ಇರಿಸಿದ್ದೇವೆ ಅಂತಾ ಬೀಗುತ್ತಿದೆ. ಕೇಂದ್ರ ಶಿಕ್ಷಣ ಇಲಾಖೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ರೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಹೊಸ ಶಿಕ್ಷಣ ನೀತಿಗೆ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಅಂದ್ರೆ ಎನ್ಎಸ್ಯುಐ ವಿರೋಧಿಸಿದೆ. ರಾಜ್ಯ ಸರ್ಕಾರ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಹೀಗಾಗಿ ಇದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ವಿದ್ಯಾರ್ಥಿಗಳು ಬಂದ್ ಗೆ ಕರೆ ಕೊಟ್ಟಿದ್ದಾರೆ.