ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸೂಚ್ ಹೊಲಿಸಿಕೊಳ್ಳೋರ ಸಂಖ್ಯೆ ಹೆಚ್ಚಾಗಿದೆ ಎಂಬುದಾಗಿ ಕರ್ನಾಟಕ ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮುಡಾ ಹಗರಣದ ರೂವಾರಿ ಸಿದ್ಧರಾಮಯ್ಯನವರು ರಾಜೀನಾಮೆ ನೀಡುವ ಒಳ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೇರಲು ಸೂಟ್ ಹೊಲೆಸಿಕೊಳ್ಳುವವರ ಸಂಖ್ಯೆ ಹೆಚ್ಚಾಗ ತೊಡಗಿದೆ ಎಂದು ವ್ಯಂಗ್ಯವಾಡಿದೆ.
ನಾವೆಲ್ಲರೂ ಸಿದ್ದರಾಯ್ಯನವರ ಬೆಂಬಲಕ್ಕೆ ಬಂಡೆಯಂತೆ ನಿಲ್ಲುತ್ತೇವೆ ಎಂದು ಹೇಳುತ್ತಿದ್ದವರೇ ಈಗ ತಾವು ಸಿಎಂ ಹುದ್ದೆಯ ಆಕಾಂಕ್ಷಿಗಳು ಎನ್ನತೊಡಗಿದ್ದಾರೆ. ಹೀಗಾಗಿ, ಸಿದ್ದರಾಮಯ್ಯನವರ ಕುರ್ಚಿಗೆ ಬಂದಿರುವ ಕಂಟಕವನ್ನ ಸ್ವತಃ ಆ ವಿಘ್ನ ವಿನಾಯಕನೂ ತಪ್ಪಿಸಲಾರ ಎಂದು ಭವಿಷ್ಯ ನುಡಿದಿದೆ.
ಹಿರಿಯ ಶಾಸಕ ಆರ್ ವಿ ದೇಶಪಾಂಡೆ ಅವರ ಎಪಿಸೋಡ್ ಮುಗಿಯುತ್ತಿದ್ದಂತೆ ಸಚಿವ ಎಂ.ಬಿ ಪಾಟೀಲ್ ತಾವು ಸಿಎಂ ಆಕಾಂಕ್ಷಿಯೆಂದು ಡಂಗೂರ ಸಾರುತ್ತಿದ್ದಾರೆ. ಹೊರಗೆ ಬೆಂಬಲ, ಒಳಗೆ ಹಂಬಲ ವಿಟ್ಟುಕೊಂಡಿರುವ ಕೆಲ ಕಾಂಗ್ರೆಸ್ಸಿಗರೆಲ್ಲಾ ಸಿದ್ದರಾಮಯ್ಯನವರು ಯಾವಾಗ.? ಕುರ್ಚಿ ಖಾಲಿ ಮಾಡುತ್ತಾರೆ ಎಂಬುವುದನ್ನೇ ಕಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದೆ.
ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಸಿದ್ಧರಾಮಯ್ಯ
BREAKING: ತುಮಕೂರಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಮೂವರು ದುರ್ಮರಣ | Tumkur Accident
ALERT : ಅತಿಯಾಗಿ ಮೊಬೈಲ್ ಬಳಸುವವರೇ ಎಚ್ಚರ : ಈ ಅಪಾಯಕಾರಿ ರೋಗ ನಿಮ್ಮನ್ನು ಕಾಡಬಹುದು!