BREAKING: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವ ಪತ್ತೆ

ಬೆಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿ ಇರುವಂತ ದಯಾನಂದ ಸಾಗರ್ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಅಟಾಮಿಕ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿ ಅನಾಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಹತ್ಯೆಯೋ ಎನ್ನುವುದು ತನಿಖೆಯಿಂದ ತಿಳಿಯಬೇಕು. ಸ್ಥಳದಲ್ಲಿ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗುತ್ತದೆ.