ಮಂಡ್ಯ : ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಅವರ ಅವೈಜ್ಞಾನಿಕ ಒಳ ಮೀಸಲಾತಿ ವರದಿ ತಿರಸ್ಕರಿಸುವಂತೆ ಒತ್ತಾಯಿಸಿ ಮದ್ದೂರು ತಾಲೂಕು ಬಲಗೈ ಜಾತಿಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಬೆಂಗಳೂರು ಚಲೋ ನಡೆಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ನೇತೃತ್ವದಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಒಕ್ಕೂಟದ ನೂರಾರು ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಉರಿಲಿಂಗಿ ಪೆದ್ದ ಮಠದ ಪೀಠಾಧ್ಯಕ್ಷ ಜ್ಞಾನ ಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು
ಬಸ್ ಗಳಲ್ಲಿ ತೆರಳಿದರು.
ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುರೇಶ್ ಕಂಠಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ರಾಜ್ಯ ಛಲವಾದಿ ಮಹಾಸಭಾದ ಮನವಿಯನ್ನು ಗಣನೆಗೆ ತೆಗೆದುಕೊಳ್ಳದೆ ಏಕ ಪಕ್ಷಿಯವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ, ಬಲಗೈ, ಛಲವಾದಿ ಸಮುದಾಯಕ್ಕೆ ಸೇರಿದ ಹಲವು ಜಾತಿಗಳನ್ನು ಶೇಕಡ 1 ಗುಂಪಿಗೆ ಸೇರಿಸಿರುವುದು ಛಲವಾದಿ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಹೀಗಾಗಿ ಸರ್ಕಾರ ಅವರ ವರದಿಯನ್ನು ತಿರಸ್ಕರಿಸುವಂತೆ ಸುರೇಶ್ ಕಂಠಿ ಆಗ್ರಹ ಮಾಡಿದರು.
ಚಲೋ ಕಾರ್ಯಕ್ರಮದಲ್ಲಿ ಬಿಜೆಪಿ ಎಸ್.ಸಿ.ಘಟಕದ ಜಿಲ್ಲಾಧ್ಯಕ್ಷ ನಿತ್ಯಾನಂದ, ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಾದ ಈಶ್ವರ, ರವಿಕುಮಾರ್, ರುದ್ರಣ್ಣ, ಸುರೇಶ್, ಮುಖಂಡರಾದ ಕರಡಕೆರೆ ಯೋಗೇಶ್, ಮಡೇನಹಳ್ಳಿ ತಿಮ್ಮಯ್ಯ, ಗ್ರಾ.ಪಂ ಮಾಜಿ ಸದಸ್ಯ ರಾಜೇಂದ್ರ, ಸೋಮು, ಸಂತೋಷ, ಅಪ್ಪು, ನಿತ್ಯಾನಂದ, ಬ್ಯಾಲದಕೆರೆ ಕೆಂಪರಾಜು ಮತ್ತಿತರರಿದ್ದರು.
ವರದಿ : ಗಿರೀಶ್ ರಾಜ್, ಮಂಡ್ಯ
ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಹಣ್ಣು ನೀಡಿ ಕುಶಲೋಪರಿ ವಿಚಾರಣೆ