ಬೆಂಗಳೂರು: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೂ ಅಶ್ಲೀಲ ಕಾಮೆಂಟ್ ಕಾಟ ಕೊಡಲಾಗಿದೆ. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ.
ವೈಯಕ್ತಿಕ ಇನ್ಟಾ ಗ್ರಾಮ್ ಖಾತೆಯಲ್ಲಿನ ಪೋಸ್ಟ್ ಗೆ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ವೇಶ್ಯ ಎಂದು ಕಾಮೆಂಟ್ ಮಾಡಿದ್ದಾರೆಂದು ನಯನಾ ಮೋಟಮ್ಮ ಆರೋಪಿಸಿದ್ದಾರೆ. ಇನ್ ಸ್ಟಾಗ್ರಾಮ್ ನಲ್ಲಿ ಎರಡು ಅಧಿಕೃತ ಖಾತೆ ಹೊಂದಿರುವ ನಯನಾ ಮೋಟಮ್ಮಗೆ ಈ ರೀತಿಯಾಗಿ ಅಶ್ಲೀಲ ಕಾಮೆಂಟ್ ಮಾಡಿ ಕಾಟ ಕೊಡಲಾಗಿದೆ.
ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪ್ರತ್ಯೇಕ ಖಾತೆ, ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಮತ್ತೊಂದು ಖಾತೆಯನ್ನು ನಯನಾ ಹೊಂದಿದ್ದಾರೆ. ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳುವ ಖಾತೆಯಲ್ಲಿ ಅಶ್ಲೀಲ ಕಾಮೆಂಟ್ ಮಾಡಲಾಗಿದೆ. ಈ ಬಗ್ಗೆ ಬೇಸರ ವ್ಯಕ್ತ ಪಡಿಸಿರುವಂತ ನಯನಾ ಮೋಟಮ್ಮ ಅವರು ಮಹಿಳಾ ವಿರೋಧಿ ಮನೋಭಾವವನ್ನು ನಾನು ವಿರೋಧಿಸುತ್ತಿದ್ದೇನೆ ಎಂದಿದ್ದಾರೆ.
ಸ್ಲೀವ್ ಲೆಸ್ ಬಟ್ಟೆ ಹಾಕಿದ್ರೆ ಕೆಲಸ ಮಾಡದ ರಾಜಕಾರಣಿ ಎನ್ನುತ್ತಾರೆ. ವೇಶ್ಯೆ ಎನ್ನುವ ಮಟ್ಟಕ್ಕೂ ಇಳಿಯುತ್ತಾರೆ ಎಂಬುದಾಗಿ ಶಾಸಕಿ ನಯನಾ ಮೋಟಮ್ಮ ಬೇಸರ ವ್ಯಕ್ತ ಪಡಿಸಿದ್ದಾರೆ. ಡಿಪಿ ಇಲ್ಲದ ಪ್ರೊಫೈಲ್ ಇಟ್ಟುಕೊಂಡು ಕಾಮೆಂಟ್ ಮಾಡುತ್ತಾರೆ. ಬಹುಶಹ ನಾನು ಒಂದು ದಿನ ಅವರನ್ನು ಎದುರಿಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೆ ಅವಕಾಶ.!
CRIME NEWS: ತಾಯಿ ಮೇಲಿನ ಸಿಟ್ಟಿಗೆ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ








