ಬೆಳಗಾವಿ: ನಗರದಲ್ಲಿ ನಡೆದಂತ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆದಂತ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ರಾಜಶೇಖರ ತಳವಾರ ಎಂಬುವರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ರಮೇಶ್ ಕತ್ತಿ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ಅವರು ನಾಯಕ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿ.ಕೆ ಮಾಡೆಲ್ ಶಾಲೆಯ ಆವರಣದಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ವಾಲ್ಮೀಕಿ ಸಮುದಾಯದವರು ಅಶ್ಲೀಲ ಪದ ಬಳಕೆ ಮಾಡಿದ್ದಕ್ಕೆ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಅಲ್ಲೇ ನಾಳೆ ಬೆಳಗಾವಿ ಜಿಲ್ಲೆಯಾಧ್ಯಂತ ಬಂದ್ ಮಾಡಿ ಪ್ರತಿಭಟನೆಗೂ ಕರೆ ನೀಡಲಾಗಿದೆ.
BREAKING: ಕೇಂದ್ರ ಸರ್ಕಾರದಿಂದ ‘SDRF ನಿಧಿ’ಯಿಂದ ಕರ್ನಾಟಕಕ್ಕೆ ‘384 ಕೋಟಿ ನೆರೆ ಪರಿಹಾರ’ ಬಿಡುಗಡೆ
ಮಕ್ಕಳ ದೈಹಿಕ ಶಕ್ತಿ ಹೆಚ್ಚಳಕ್ಕೆ, ಚುರುಕುತನಕ್ಕೆ ‘ಈಜು’ ಪೂರಕ: ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್








