ಬೆಂಗಳೂರು : ಇತ್ತೀಚಿಗೆ KD ಸಿನಿಮಾದ ಸರ್ಸೆ ಸೆರಗ ಸರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ ಹಿನ್ನೆಲೆಯಲ್ಲಿ, ನಿನ್ನೆ ಈ ಒಂದು ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿಟ್ಟು. ಇದೀಗ ನಿರ್ದೇಶಕ ಪ್ರೇಮ್, ನಟಿ ನೋರಾ ಫತೇಹಿ ಸೇರಿದಂತೆ ಹಲವರಿಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ನಿರ್ದೇಶಕ ಪ್ರೇಮ್, ನಿರ್ಮಾಪಕ ವೆಂಕಟ್ ನಾರಾಯಣ್, ನಟಿ ನೋರಾ ಫತೇಹಿ, ನಟ ಸಂಜಯ್ ದತ್, ಹಿಂದಿ ಹಾಡಿನ ಬರಹಾರ ರಕೀಬ್ ಆಲ್ಬಂಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಾ.24 ರಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
1990ರ ಎನ್ಸಿಡಬ್ಲ್ಯೂ ಕಾಯ್ದೆಯ ಅಡಿಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲು ಮಾಡಿದೆ. ಪ್ರಾಥಮಿಕ ಲೈಂಗಿಕವಾಗಿ ಸೂಚಿಸುವ, ಆಕ್ಷೇಪಾರ್ಹ ಮತ್ತು ಭಾರತೀಯ ನ್ಯಾಯ ಸಂಹಿತಾ, ಐಟಿ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿರುವ ನಿಬಂಧನೆಗಳನ್ನು ಸಿನಿಮಾ ಟೀಂ ಉಲ್ಲಂಘಿಸಿದೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಿದೆ.








