ಜಜ್ಪುರ್ (ಒಡಿಶಾ): ಅತ್ಯಾಚಾರವೆಸಗಲು ಮುಂದಾದ ಐವರಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದ ಮೇಲ್ಛಾವಣಿಯಿಂದ ಹಾರಿ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ್ ಜಿಲ್ಲೆಯಲ್ಲಿ ನಡೆದಿದೆ.

ಭಾರೀ ಮಳೆಯಾಗುತ್ತಿದ್ದರಿಂದ ಶಾಲೆಯಲ್ಲಿ ಆಶ್ರಯ ಪಡೆಯುವಂತೆ ಬಾಲಕಿ ಮತ್ತು ಆಕೆಯ ಸಹೋದರನಿಗೆ ಈ ಐವರು ಆರೋಪಿಗಳು ಸಲಹೆ ನೀಡಿದ್ದಾರೆ. ನಂತ್ರ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದ ಮೇಲ್ಛಾವಣಿಯಿಂದ ಬಾಲಕಿ ಜಿಗಿದಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಕಳಿಂಗನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ, ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏನಿದು ಘಟನೆ?

ಭಾನುವಾರ ರಾತ್ರಿ ಒಡಿಶಾದ ಕಿಯೋಂಜಾರ್ ಜಿಲ್ಲೆಯ ನಿವಾಸಿಯಾಗಿರುವ ಬಾಲಕಿ ತನ್ನ ಸಹೋದರನೊಂದಿಗೆ ತನ್ನ ಸಹೋದರಿಯ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಇವರಿಬ್ಬರೂ ಬಸ್‌ನಿಂದ ಇಳಿದಾಗ, ಆ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿತ್ತು. ಬಾಲಕಿಯನ್ನು ನೋಡಿದ ಕಿಡಿಗೇಡಿಗಳು ಶಾಲಾ ಕಟ್ಟಡದಲೇ ಉಳಿದು ಮಳೆ ನಿಂತ ಮೇಲೆ ಹೋಗುವಂತೆ ಸಲಹೆ ನೀಡಿ ಹೋಗಿದ್ದರು. ಆದ್ರೆ, ಮತ್ತೆ ಹಿಂತಿರುಗಿದ ಐವರು ಸಹೋದರನನ್ನು ಥಳಿಸಿ ಓಡಿಸಿದ್ದು, ಅತ್ಯಾಚಾರಕ್ಕೆ ಮುಂದಾಗಿದ್ದಾರೆ.

ಬಾಲಕಿ ಇವರಿಂದ ತಪ್ಪಿಸಿಕೊಳ್ಳಲು ಶಾಲೆಯ ಕಟ್ಟಡದ ಮೇಲ್ಛಾವಣಿಯ ಮೇಲೆ ಓಡಿ, ಅಲ್ಲಿಂದ ಜಿಗಿದು ತೀವ್ರವಾಗಿ ಗಾಯಗೊಂಡಿದ್ದಾಳೆ. ಇದನ್ನು ಕಂಡ ಸಹೋದರ ಸಹಾಯಕ್ಕಾಗಿ ಕಿರುಚಾಡಿದ್ದಾನೆ. ಕಿರುಚಾಟದ ಸದ್ದನ್ನು ಕೇಳಿ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಪೊಲೀಸರು ಗ್ರಾಮಕ್ಕೆ ಆಗಮಿಸಿ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಆಗುವುದು ಹೇಗೆ? ಮಹಾ ಸಿಎಂ ಏಕನಾಥ್ ಶಿಂಧೆಯಿಂದ ಸಲಹೆ ಕೇಳಿದ ಬಾಲಕಿ!… Video

BIGG NEWS : ವಿಕಲಚೇತನರಿಗೆ ಸಿಹಿಸುದ್ದಿ : ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Share.
Exit mobile version