ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಅಧಿಕೃತವಾಗಿ ಆಹ್ವಾನ ನೀಡಲಾಯಿತು. ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಯ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.

ಈ ವೇಳೆ ಸಚಿವೆ ಶಶಿಕಲಾ ಜೊಲ್ಲೆ ಸಂಸದ ಪ್ರತಾಪ್ ಸಿಂಹ ಅಣ್ಣಸಾಹೇಬ ಶಂಕರ ಜೊಲ್ಲೆ ಮತ್ತು ಮೈಸೂರು ಮೇಯರ್ ಶಿವಕುಮಾರ್ ಅವರು ಉಪಸ್ಥಿತರಿದ್ದರು.ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿ ಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Share.
Exit mobile version