ಬೆಂಗಳೂರು: ಬೆಂಗಳೂರಿನಲ್ಲಿರುವ ಶಾಸಕ ಹೆಚ್‌ಡಿ ರೇವಣ್ಣನವರ ಮನೆ ಮೇಲೆ ನಿನ್ನೆ ರಾತ್ರಿ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಮಹ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ದಾಳಿ ವೇಳೆ ಹೆಚ್.ಡಿ ರೇವಣ್ಣನವರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವ ಹೆಚ್‌ಡಿ ರೇವಣ್ಣನವರ ಮನೆ ಮೇಲೆ ದಾಳಿ ನಡೆಸಿದ್ದು, ವಿಡಿಯೋವನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಹಲವು ಎಸ್‌ಐಟಿ ಅಧಿಕಾರಿಗಳು ಹಾಸನದ ಕೆಲವು ಕಡೆಗಳಲ್ಲಿ ಕೂಡ ದಾಳಿ ನಡೆಸಿದ್ದು, ವಿಡಿಯೋದಲ್ಲಿರುವ ಮನೆಗಳ ಹುಡುಕಾಡದಲ್ಲಿ ಇದ್ದಾರೆ ಎನ್ನಲಾಗಿದೆ. ಇದಲ್ಲದೇ ವಿಡಿಯೋದಲ್ಲಿರುವ ಮಹಿಳೆಯರನ್ನು ಕೂಡ ಪತ್ತೆ ಹಚ್ಚುವುದಕ್ಕೆ ಕೂಡ ಮುಂದಾಗಿದ್ದು, ಕೆಲವು ಮಹಿಳೆಯರನ್ನು ವಿಡಿಯೋದಲ್ಲಿರುವ ಮಹಿಳೆಯರನ್ನು ಪತ್ತೆ ಹಚ್ಚಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಬರುವಂತೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. .