ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಸರ್ಕಾರಿ ಅತಿಥಿ ಗೃಹಗಳನ್ನು ಕಂದಾಯ ಅಧಿಕಾರಿಗಳ ಸುಪರ್ಧಿಗೆ ಮಾದರಿ ನೀತಿ ಸಂಹಿತೆ ಕಾರಣ ನೀಡಲಾಗಿದೆ. ಈ ನೀತಿ ಸಂಹಿತೆ ಉಲ್ಲಂಘಿಸಿ, ಐಬಿಯಲ್ಲೇ ಇಂಜಿನೀಯರ್, ಗುತ್ತಿಗೆದಾರರು ಸೇರಿ ಎಣ್ಣೆ ಪಾರ್ಟಿ ಮಾಡಿದ್ದಕ್ಕಾಗಿ ಬಾಗಲಕೋಟೆ ಜಿಲ್ಲಾಧಿಕಾರಿ ಇಂಜಿನಿಯರ್, ಜಮಖಂಡಿ ತಹಶೀಲ್ದಾರ್ ಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಬಾಗಲಕೋಟೆಯ ಐಬಿಯಲ್ಲೇ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುತ್ತಿಗೆದಾರರೊಂದಿಗೆ ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಇಂಜಿನಿಯರ್, ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ್ದರು. ಹೀಗೆ ಸರ್ಕಾರಿ ಅತಿಥಿ ಗೃಹದಲ್ಲೇ ಭರ್ಜರಿ ಎಣ್ಣೆ ಪಾರ್ಟಿ ಮಾಡುತ್ತಿದ್ದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ವೀಡಿಯೋ ಸಂಬಂಧ ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಇಂಜಿನಿಯರ್ ಹಾಗೂ ಜಮಖಂಡಿ ತಹಶೀಲ್ದಾರ್ ಸದಾಶಿವಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಹಿನ್ನಲೆಯಲ್ಲಿ ಹೊರಗಿನವರಿಗೆ ಅವಕಾಶ ಇರೋದಿಲ್ಲ. ಸರ್ಕಾರಿ ವಸತಿ ಗೃಹಗಳಲ್ಲಿ ಹೊರಗಿನವರಿಗೆ ಅವಕಾಶ ಇರೋದಿಲ್ಲ. ಸರ್ಕಾರಿ ವಸತಿ ಗೃಹಗಳನ್ನು ತಮ್ಮ ಸುಪರ್ಧಿಗೆ ತಗೊಂಡಿದ್ದೀರಿ. ನಿಮ್ಮ ಅನುಮತಿ ಇಲ್ಲದೇ ಜಿಲ್ಲಾ ಪಂಚಾಯ್ತಿ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೇಗೆ ಸರ್ಕಾರಿ ವಸತಿ ಗೃಹಕ್ಕೆ ಹೋಗಿದ್ದಾರೆ ಅಂತ ಶೋಕಾಸ್ ನೋಟಿಸ್ ನಲ್ಲಿ ಪ್ರಶ್ನಿಸಿದ್ದಾರೆ.

1951ರ ಕಲಂ 134ರ ಪ್ರಕಾರ ಯಾಕೆ ನಿಮ್ಮ ವಿರುದ್ಧ ಕ್ರಮ ಜರುಗಿಸಬಾರದು? ನೋಟಿಸ್ ತಲುಪಿದ 24 ಗಂಟೆಗಳಲ್ಲಿ ಉತ್ತರ ನೀಡಬೇಕು. ತಪ್ಪಿದ್ದಲ್ಲಿ ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳೋದಾಗಿ ಜಮಖಂಡಿ ತಹಶೀಲ್ದಾರ್ ಸದಾಶಿವ ಮೆಕ್ಕೋಜಿಗೆ ಎಚ್ಚರಿಕೆ ನೀಡಿದ್ದಾರೆ.

ಅಂದಹಾಗೇ ಬಾಗಲಕೋಟೆ ಜಿಲ್ಲಾ ಪಂಚಾಯ್ತಿಯ ಎಇಇ ಎಂ ಎಸ್ ನಾಯಕ್, ಇಂಜಿನಿಯರ್ ಗಳಾದಂತ ರಾಮಪ್ಪ, ಗಜಾನನ ಪಾಟೀಲ್, ಜಗದೀಶ್ ನಾಡಗೌಡ ಸೇರಿದಂತೆ 6 ಮಂದಿ ಐಬಿಯಲ್ಲೇ ನೀತಿ ಸಂಹಿತೆ ಉಲ್ಲಂಘಿಸಿ ಭರ್ಜರಿ ಎಣ್ಣೆ ಪಾರ್ಟಿ ನಡೆಸಿದ್ದರು.

Update Breaking: ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಆರು ಮಂದಿ ಸಾವು, 25 ಜನರಿಗೆ ಗಾಯ

ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ : ಸಿಎಂ ಸಿದ್ದರಾಮಯ್ಯ

Share.
Exit mobile version