ವಿಜಯಪುರ : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಮಧ್ಯ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೇಳಿಕೆ ನೀಡಿದ್ದು, ಮನೆಯಲ್ಲಿ ಬಿಎಸ್ ಯಡಿಯೂರಪ್ಪ ಅವರಿಗೆ ಮುದಿಯ ಅಂತ ಕರೀತಾರೆ ಹೊರಗಡೆ ಮಾತ್ರ ಪೂಜೆ ತಂದೆಯವರು ಎಂದು ನಾಟಕ ಮಾಡುತ್ತಾರೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ ಎಂದರು.
ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋದದ್ದು, ಅವನಿಂದಲೇ ಹಾಳಾಗಿದ್ದು, ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ. ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ.ನಮ್ಮ ವಿರುದ್ಧ ಎರಡು ಹಂದಿಗಳು ಬಿಟ್ಟರೆ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವಿಜಯೇಂದ್ರ ಪರ ಹೊಗಳು ಭಟರು ಮಾತ್ರ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.
ಯಡಿಯೂರಪ್ಪ ಕೂಡ ಎಷ್ಟು ಜನರಿಗೆ ಮೋಸ ಮಾಡಿಲ್ಲ. ಬಿಬಿ ಶಿವಪ್ಪ, ಮಲ್ಲಿಕಾರ್ಜುನಯ್ಯ ಅವರಿಗೆ ಅನ್ಯಾಯ ಮಾಡಿದ್ದಾನೆ. ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದಾರೆ. ಸುಮ್ಮನೇ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂಡಲಿ ಎಂದು ವಾಗ್ದಾಳಿ ನಡೆಸಿದರು.