ನವದೆಹಲಿ: ಭಾರತದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಿಗಿಂತ ಮಹಿಳೆಯರು ಸರಾಸರಿ ಹೆಚ್ಚು ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಬಹಿರಂಗಪಡಿಸಿದೆ. ಆದಾಗ್ಯೂ, ಎನ್ಎಫ್ಎಚ್ಎಸ್ ದತ್ತಾಂಶದ ಪ್ರಕಾರ, ತಮ್ಮ ಸಂಗಾತಿ ಅಲ್ಲದ ಅಥವಾ ತಮ್ಮೊಂದಿಗೆ ವಾಸಿಸದ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯರ ಪ್ರಮಾಣ ಶೇ 4ರಷ್ಟಿದೆ. ಇದೇ ರೀತಿಯ ಪುರುಷರ ಪ್ರಮಾಣ ಕೇವಲ ಶೇ 0.5 ಮಾತ್ರ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ವರದಿ ಹೇಳಿದೆ.
1.1 ಲಕ್ಷ ಮಹಿಳೆಯರು ಮತ್ತು 1 ಲಕ್ಷ ಪುರುಷರ ನಡುವೆ ನಡೆಸಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳೆಯರ ಸರಾಸರಿ ಲೈಂಗಿಕ ಪಾಲುದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ ಎಂದು ತೋರಿಸಿದೆ. ಪುರುಷರಲ್ಲಿ 1.8 ರಷ್ಟಿದ್ದರೆ, ರಾಜಸ್ಥಾನದಲ್ಲಿ ಸರಾಸರಿ 3.1 ಲೈಂಗಿಕ ಪಾಲುದಾರರನ್ನು ಹೊಂದಿರುವ ಮಹಿಳೆಯರ ಸಂಖ್ಯೆ ಅತ್ಯಧಿಕವಾಗಿದೆ ಎಂದು ಸಮೀಕ್ಷೆ ತಿಳಿಸಿದೆ. ಆದರೆ ಸಮೀಕ್ಷೆಯ ಹಿಂದಿನ 12 ತಿಂಗಳುಗಳಲ್ಲಿ, ತಮ್ಮ ಸಂಗಾತಿ ಅಥವಾ ಲಿವ್-ಇನ್-ಪಾರ್ಟ್ನರ್ ಅಲ್ಲದ ಯಾರೊಂದಿಗಾದರೂ ಲೈಂಗಿಕ ಸಂಭೋಗ ನಡೆಸಿದ ಪುರುಷರ ಶೇಕಡಾವಾರು ಪ್ರಮಾಣವು ಶೇಕಡಾ 4 ರಷ್ಟಿತ್ತು. ಮಹಿಳೆಯರ ಸಂಖ್ಯೆ ಶೇ.0.5ರಷ್ಟಿದೆಯಂತೆ.
ಸಮೀಕ್ಷೆ ಮತ್ತು ಅದರ ಮಹತ್ವ
2019-21ರಲ್ಲಿ ನಡೆಸಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರಲ್ಲಿ ದೇಶದ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳ 707 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ರಾಷ್ಟ್ರೀಯ ವರದಿಯು ಸಾಮಾಜಿಕ-ಆರ್ಥಿಕ ಮತ್ತು ಇತರ ಹಿನ್ನೆಲೆ ಗುಣಲಕ್ಷಣಗಳಿಂದ ದತ್ತಾಂಶವನ್ನು ಒದಗಿಸುತ್ತದೆ, ಇದು ನೀತಿ ನಿರೂಪಣೆ ಮತ್ತು ಪರಿಣಾಮಕಾರಿ ಕಾರ್ಯಕ್ರಮ ಅನುಷ್ಠಾನಕ್ಕೆ ಉಪಯುಕ್ತವಾಗಿದೆ.