ಮೈಸೂರು: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ BQ.1 ತಳಿಯ ಮೊದಲ ಪ್ರಕರಣ ವರದಿಯಾಗಿದೆ. ಈ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಕೆಲವು ವಿಚಾರಗಳ ಮೇಲೆ ಎಚ್ಚರಿಕೆ ವಹಿಸುತ್ತಿದೆ.
Vastu Tips: ನಿಮ್ಮ ಮನೆ ಮುಖ್ಯದ್ವಾರದ ಬಳಿ ಏನೆಲ್ಲಾ ವಸ್ತು ಇಡಬೇಕು..! ವಾಸ್ತು ಸಲಹೆಗಳೇನು?
ಎರಡು ದಿನಗಳ ಹಿಂದಷ್ಟೇ ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡುವ ಮೂಲಕ ಸಲಹಾ ಪತ್ರವನ್ನು ಹಂಚಿಕೊಂಡದ್ದರು.ಸದ್ಯ ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ರೂಪಾಂತರಿ ಆತಂಕ ವಿಚಾರಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಮಾತನಾಡಿ ಜನತೆ ಮೂರನೇ ಡೋಸ್ ಹಾಕಿಸಿಕೊಳ್ಳಲು ಮನವಿ ಮಾಡಿದ್ದಾರೆ.
Vastu Tips: ನಿಮ್ಮ ಮನೆ ಮುಖ್ಯದ್ವಾರದ ಬಳಿ ಏನೆಲ್ಲಾ ವಸ್ತು ಇಡಬೇಕು..! ವಾಸ್ತು ಸಲಹೆಗಳೇನು?
ಯಾವುದೇ ಆತಂಕವಿಲ್ಲ, ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಮಹಾರಾಷ್ಟ್ರದಲ್ಲಿ ಈಗಾಗಲೇ ಒಂದು ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಕಟ್ಟೆಚ್ಚರ ವಹಿಸುವಂತೆ ಗಡಿ ಜಿಲ್ಲೆಯ ಡಿಸಿಗಳಿಗೆ ಸೂಚಿಸಲಾಗಿದೆ.