ದಾವಣಗೆರೆ: ಓಮಿನಿ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾದ ಪರಿಣಾಮ ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಮೃತರನ್ನು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80) ಅಂತ ತಿಳಿದು ಬಂದಿದೆ. ಮೃತರು ಹಾಗೂ ಗಾಯಾಳುಗಳು ಚನ್ನಗಿರಿ ತಾಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.