ಬೆಳಗಾವಿ: ನಿಗದಿಯಂತೆ ಸೆಪ್ಟೆಂಬರ್.22ರಂದು ಸಾಹಿತಿ ಬಾನು ಮುಷ್ತಾಕ್ ಅವರು ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಿದ್ದಾರೆ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಲೇಖಕಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧ ಮಾಡಬಾರದಿತ್ತು. ಈ ವಿಚಾರದಲ್ಲಿ ಬಿಜೆಪಿಯವರು ಅನಗತ್ಯವಾಗಿ ಗೊಂದಲ ಸೃಷ್ಠಿಸಿದರು ಎಂಬುದಾಗಿ ಹೇಳಿದರು.
ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿರೋಧಿಸಿ ಬಿಜೆಪಿಯವರಿಗೆ ಕೊನೆಗೂ ನ್ಯಾಯಾಲಯದಿಂದ ಸೂಕ್ತ ಉತ್ತರ ಸಿಕ್ಕಿದೆ. ದಸರಾ ಮಾಡೋದು ಉದ್ಘಾಟನೆ ಮುಖ್ಯ, ಜಾತಿ ಧರ್ಮ ಮುಖ್ಯವಲ್ಲ. ಈ ಹಿಂದೆ ಬೇರೆ ಧರ್ಮದವರು ದಸರಾವನ್ನು ಉದ್ಘಾಟನೆ ಮಾಡಿದ್ದಾರೆ. ರಾಜಕೀಯಕ್ಕಾಗಿ ಬಿಜೆಪಿಯವರು ಇನ್ನು ಬಳಸಿಕೊಂಡಿದ್ದು ಸರಿಯಲ್ಲ ಎಂದರು.
BIG NEWS : ದಸರಾ ಉದ್ಘಾಟನೆ, ಮುಲ್ಲಾಗಳ ಪ್ರಕಾರ ನಡೆಯುತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ