ಬೆಂಗಳೂರು: ಏಪ್ರಿಲ್.23, 2024ರಂದು ಐತಿಹಾಸಿಕ ಕರಗ ಮಹೋತ್ಸವ ಬೆಂಗಳೂರಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಏಪ್ರಿಲ್.23ರಂದು ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಅಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ ಇದೆ. ಹೀಗಾಗಿ ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಈ ಆದೇಶ ಮಾಡಿರೋದಾಗಿ ಹೇಳಿದ್ದಾರೆ.
ಅಂದಹಾಗೇ ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಎಸ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐತಿಹಾಸಿಕ ಕರಗ ಮಹೋತ್ಸವದಂದು ಮದ್ಯ ಮಾರಾಟ ನಿಷೇಧ ಮಾಡಿ ಆದೇಶಿಸಿದ್ದಾರೆ.
ತುಮಕೂರು ಜಿಲ್ಲೆಯಿಂದ ’31 ಕುಖ್ಯಾತ ರೌಡಿ’ಗಳನ್ನು ಗಡಿಪಾರ: ಎಸ್ಪಿ ಅಶೋಕ್ ಕೆ ವೆಂಕಟ್ ಆದೇಶ
ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!