ಪಶ್ಚಿಮ ಬಂಗಾಳ: ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಮಾತನಾಡುತ್ತಾ ನಿಂತಿದ್ದ ಪ್ರಯಾಣಿಕ ಟಿಕೆಟ್ ಪರೀಕ್ಷಕ (ಟಿಟಿಇ)ನಿಗೆ ವಿದ್ಯುತ್ ತಂತಿ ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿ, ರೈಲು ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಟಿಟಿಇ ವ್ಯಕ್ತಿಯೊಬ್ಬನೊಂದಿಗೆ ಮಾತನಾಡುತ್ತಾ ನಿಂತಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ್ದು, ರೈಲು ಹಳಿ ಮೇಲೆ ಬೀಳುವುದನ್ನು ನೋಡಬಹುದು.
A freak accident – a long piece of loose cable, taken by a bird somehow came in contact with the OHE wire and the other end came down and touched a TTE’s head. He suffered burn injuries but is out of danger and under treatment – at Kharagpur station yesterday afternoon! #Accident pic.twitter.com/ObEbzd1cOF
— Ananth Rupanagudi (@Ananth_IRAS) December 8, 2022
ಟಿಟಿಇಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
BIGG NEWS : ಗುಜರಾತ್ ಫಲಿತಾಂಶ ಕರ್ನಾಟಕದ ಚುನಾವಣೆ ಮೇಲೂ ಪರಿಣಾಮ ಬೀರಲಿದೆ : ಸಚಿವ ಮುರುಗೇಶ್ ನಿರಾಣಿ