ಮೈಸೂರು: ಜಿಲ್ಲೆಯಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ನಿಗದಿಪಡಿಸಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಜುಲೈ.19ರಂದು ರಾಜ್ಯ ಸರ್ಕಾರದಿಂದ ಬೃಹತ್ ಸಾಧನಾ ಸಾಮಾವೇಶವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2,600 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ಮತ್ತು ಲೋಕಾರ್ಪಣೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ.
ಜುಲೈ.19ರಂದು ಸಾಧನಾ ಸಮಾವೇಶದ ಮೂಲಕ ಹಳಏ ಮೈಸೂರು ಭಾಗದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ಈ ಸಮಾವೇಶದ ಜವಾಬ್ದಾರಿಯನ್ನು ಸಿಎಂ ಆಪ್ತ ಮತ್ತು ಸಚಿವ ಡಾ.ಹೆಚ್.ಸಿ ಮಹಾದೇವಪ್ಪ ಅವರಿಗೆ ನೀಡಲಾಗಿದೆ.
ಮೈಸೂರಿನ ಸಾಧನಾ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 3 ದಿನ ಮೊದಲೇ ಮೈಸೂರಿಗೆ ತೆರಳಲಿದ್ದಾರೆ. ಈಗಾಗಲೇ ಮೈಸೂರು, ಚಾಮರಾಜನಗರ ಜಿಲ್ಲೆ ಶಾಸಕರ ಜೊತೆ ಸಭೆ ನಡೆಸಲಾಗಿದೆ. ಸರ್ಕಾರದ ಸಾಧನಾ ಸಮಾವೇಶಕ್ಕೆ ಹೆಚ್ಚಿನ ಜನರನ್ನು ಕರೆತರಲು ಪ್ಲಾನ್ ಕೂಡ ಮಾಡಲಾಗಿದೆ. 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಸಾಧ್ಯತೆ ಇದೆ.
BREAKING: ಕಷ್ಟಗಿಯ ಶಾಸಕ ದೊಡ್ಡನಗೌಡ ಆಪ್ತ ಸಹಾಯಕ ಹೃದಯಾಘಾತದಿಂದ ಸಾವು
Watch Video: ಇಂಗ್ಲೀಷ್ ಮೇಷ್ಟ್ರಾದ ಸಚಿವ ಡಾ.ಶರಣಪ್ರಕಾಶ ಪಾಟೀಲ: ವೀಡಿಯೋ ವೈರಲ್