ಸೇಡಂ: ಭಯೋತ್ಪಾದನೆಯ ವಿರುದ್ಧ ಭಾರತದ ದೃಢ ನಿಲುವಿನ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ಅಭೂತ ಪೂರ್ವ ಸಾಧನೆಗೈದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿಯಿಂದ ಸೇಡಂ ತಾಲ್ಲೂಕಿನಲ್ಲಿ ಮೇ.24ರಂದು ಬೃಹತ್ ತಿರಂಗ ಯಾತ್ರೆ ಆಯೋಜಿಸಲಾಗಿದೆ.
ಈ ಕುರಿತಂತೆ ಸೇಡಂನ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಮಾಹಿತಿ ಹಂಚಿಕೊಂಡಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನಲೆಯಲ್ಲಿ ನಮ್ಮ ಸೇಡಂ ತಾಲ್ಲೂಕಿನಲ್ಲಿ ಮೇ.24ರಂದು ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ ಎಂದಿದ್ದಾರೆ.
ಮೇ.24ರ ಶನಿವಾರದಂದು ಬೆಳಗ್ಗೆ 9 ಗಂಟೆಗೆ ಸೇಡಂನ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಿಂದ ಬೃಹತ್ ತಿರಂಗ ಯಾತ್ರೆ ಆರಂಭಿಸಲಾಗುತ್ತಿದೆ. ಈ ಯಾತ್ರೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ, ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.
BIG NEWS : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್