ಬೆಂಗಳೂರು: ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳುತ್ತದೆ. ಆದರೇ ಮೇ.25ರಂದು ಬೆಂಗಳೂರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ.25ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ದಿನಾಂಕ 25.05.2025 ಭಾನುವಾರ ದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC Preliminary Exams, 2025) ನಡೆಯಲಿರುವುದರಿಂದ, ಮೆಟ್ರೋ ರೈಲು ಸೇವೆಗಳು ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ಮಾದಾವರ, ಮತ್ತು ರೇಷ್ಮೆ ಸಂಸ್ಥೆ, ಈ ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ಬದಲಾಗಿ 06.00 ಗಂಟೆಗೆ ಪ್ರಾರಂಭವಾಗಲಿದೆ ಎಂದಿದೆ.
‘BMTC ರಿಯಾಯಿತಿ ಬಸ್ ಪಾಸ್’ ಕುರಿತಂತೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | BMTC Student Bus Pass
ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!